ಭಟ್ಕಳ (Bhatkal) : ಫೇಸ್ ಬುಕ್ (Facebook) ಖಾತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ (Minister) ಅವಮಾನ ಆಗುವ ರೀತಿಯಲ್ಲಿ ವಿಡಿಯೊವನ್ನು ಹರಿಬಿಟ್ಟು ಜನರಿಗೆ ತಪ್ಪು ಸಂದೇಶ ಸಾರಿದ ಇಬ್ಬರು ವ್ಯಕ್ತಿಗಳನ್ನು ಮುರ್ಡೇಶ್ವರ (Murdeshwar) ಪೊಲೀಸರು ವಶಕ್ಕೆ ಪಡೆದಿದ್ದಾರೆ (Two arrested).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಬೈಲೂರಿನ ದೊಡ್ಡಬಲ್ಸೆಯ ನಾಗರಾಜ ಮಾದೇವ ನಾಯ್ಕ ಮತ್ತು ಬೈಲೂರಿನ ಸಣ್ಣಬಲ್ಸೆಯ ಭಾಸ್ಕರ ನಾರಾಯಣ ದೇವಾಡಿಗ ಪೊಲೀಸರ ವಶದಲ್ಲಿರುವ ಆರೋಪಿಗಳು. ಇವರು “ಭಟ್ಕಳಕ್ಕೆ ಬದಲಾವಣೆ” ಎಂಬ ಫೇಸ್ ಬುಕ್ ಖಾತೆಯಲ್ಲಿ ಉತ್ತರ ಕನ್ನಡ (Uttara Kannada) ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ (Mankal Vaidya) ಅವರಿಗೆ ಉದ್ದೇಶ ಪೂರ್ವಕವಾಗಿ ಅವಮಾನ ಆಗುವ ರೀತಿಯಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಸುಮಾರು ೧ ನಿಮಿಷ ೨೯ ಸೆಕೆಂಡ್ ಸಮಯ ಇರುವ ವಿಡಿಯೋವನ್ನು ಹರಿಬಿಟ್ಟು ಜನರಿಗೆ ತಪ್ಪು ಸಂದೇಶ ತಲುಪಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಜುಗರ ಉಂಟು ಮಾಡಿದ್ದಾರೆ.
ಇದನ್ನೂ ಓದಿ : birth anniversary celebration/ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆ
ಒಂದು ಪಕ್ಷದ ಕಾರ್ಯಕರ್ತರು ಸಾರ್ವಜನಿಕ ನೆಮ್ಮದಿ ವಿರುದ್ದ ಅಪರಾಧ ಎಸಗುವಂತೆ ಮಾಡುವ ಉದ್ದೇಶವುಳ್ಳ ಮತ್ತು ಒಂದು ಪಕ್ಷದ ಕಾರ್ಯಕರ್ತರು ಅಪರಾಧವನ್ನು ಮಾಡುವಂತೆ ಪ್ರಚೋದಿಸುವ ಉದ್ದೇಶವುಳ್ಳ ಹೇಳಿಕೆಯನ್ನು, ಸುಳ್ಳು ಮಾಹಿತಿಯನ್ನು ಅಥವಾ ಗಾಳಿಸುದ್ದಿಯನ್ನು ಸಾಮಾಜಿಕ ಜಾಲತಾಣವಾದ ಪೇಸಬುಕ ಖಾತೆಯಿಂದ ಇರರರಿಗೆ ಶೇರ್ ಮಾಡಿದ್ದಾರೆ.
ಇದನ್ನೂ ಓದಿ : Table Tennis/ ಸುಧೀಂದ್ರ ಕಾಲೇಜಿನಲ್ಲಿ ಟೇಬಲ್ ಟೆನ್ನಿಸ್ ಪಂದ್ಯಾವಳಿ
ಪ್ರಕರಣದಲ್ಲಿ ಆಪಾದಿತರಾದ “ಭಟ್ಕಳಕ್ಕೆ ಬದಲಾವಣೆ” ಎಂಬ ಹೆಸರಿನ ಪೇಸ್ಬುಕ್ ಖಾತೆದಾರ ಭಾಸ್ಕರ ದೇವಡಿಗ, ನಾಗರಾಜ ಎಂ. ನಾಯ್ಕ ಹಾಗೂ ಹಿಂದೂ ಎಂಬ ಹೆಸರಿನ ಫೇಸ್ ಬುಕ್ ಖಾತೆದಾರ ತೇಜು ನಾಯ್ಕ ಹೊನ್ನಾವರ (Honnavar) ಎಂಬ ಹೆಸರಿನ ಪೇಸ್ಬುಕ್ ಖಾತೆದಾರ ಹಾಗೂ ಇತರರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಮುರುಡೇಶ್ವರ (Murudeshwar) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (complaint filed). ಇಬ್ಬರು ವ್ಯಕ್ತಿಗಳನ್ನು ಮುರ್ಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ (Two arrested).