ಭಟ್ಕಳ: ಅಕ್ರಮವಾಗಿ ವಧೆ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದನ್ನು ಖಚಿತ ಪಡಿಸಿಕೊಂಡ ಭಟ್ಕಳ (Bhatkal) ಗ್ರಾಮೀಣ ಪೊಲೀಸರು, ಜಾನುವಾರುಗಳನ್ನು ರಕ್ಷಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ (arrested) ಘಟನೆ ಮಾವಿನಕುರ್ವೆ ಪಂಚಾಯತ ವ್ಯಾಪ್ತಿಯ ಬೆಳ್ನಿಯ ಗುಡ್ಡದ ಮೇಲೆ ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಬಂಧಿತ (arrested) ಆರೋಪಿಗಳನ್ನು ಬಂದರ್ ರಸ್ತೆಯ ನಿವಾಸಿ ಸರೋಸ ಹುಸೇನ್ (37) ಹಾಗೂ ಬೆಂಗಳೂರು (Bengaluru) ಮೂಲದ ಷಣ್ಮುಖ ಕೆ ಎಸ್ ಸಿದ್ದಪ್ಪ ಎಂದು ತಿಳಿದು ಬಂದಿದೆ. ಇವರು ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ವಾಹನದಲ್ಲಿ ಪರವಾನಗಿ ಇಲ್ಲದೆ ೬ ಲಕ್ಷ ರೂ ಮೌಲ್ಯದ ೨ ಕೋಣಗಳನ್ನು ಕೇರಳದ ಮಲ್ಲಪುರದಿಂದ ಭಟ್ಕಳಕ್ಕೆ ತಂದು ಕಟ್ಟಿ ಹಾಕಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಭಟ್ಕಳ ಗ್ರಾಮೀಣ ಪೊಲೀಸ್ ನಿರೀಕ್ಷಕ ವೆಂಕಟೇಶ ಮುರನಾಳ ನೇತೃತ್ವದ ತಂಡ ದಾಳಿ ನಡೆಸಿ ಜಾನುವಾರುಗಳನ್ನು ರಕ್ಷಿಸಿದೆ. ಭಟ್ಕಳ ಗ್ರಾಮೀಣ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ ಕೊರಾಣಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.



