ರಾಯಚೂರು (Raichur) : ಸ್ಕೂಲ್ ಬಸ್ (school bus) ಮತ್ತು ಸಾರಿಗೆ ಬಸ್ ನಡುವೆ ಡಿಕ್ಕಿ (horrific accident) ಸಂಭವಿಸಿ, ಮೂವರು ಮಕ್ಕಳ ಕಾಲು ತುಂಡಾಗಿದ್ದರೆ, ಇಬ್ಬರು ಮಕ್ಕಳು ಮೃತಪಟ್ಟ (children death) ದುರ್ಘಟನೆ ರಾಯಚೂರು ಜಿಲ್ಲೆಯ ಮಾನ್ವಿ (Manvi) ತಾಲೂಕಿನ ಕಪಗಲ್ ಬಳಿ ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಒಟ್ಟು ೩೨ ಮಕ್ಕಳ ಪೈಕಿ ೧೮ ಜನರಿಗೆ ರಿಮ್ಸ್ (RIMS) ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಉಳಿದ ೧೪ ಮಕ್ಕಳಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗಿದೆ. ಈ ಪೈಕಿ ಇಬ್ಬರು ಮಕ್ಕಳು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರಿಬ್ಬರೂ ಮಾನವಿ ತಾಲೂಕಿನ ಕುರುಡಿ ಗ್ರಾಮದವರು. ಒಂದನೇ ತರಗತಿ ವಿದ್ಯಾರ್ಥಿ ಸಮರ್ಥ ಅಮರೇಶ(೬) ಮತ್ತು ಏಳನೇ ತರಗತಿ ವಿದ್ಯಾರ್ಥಿ ಶ್ರೀಕಾಂತ ಮಾರೇಶ (೧೨) ಮೃತ ದುರ್ದೈವಿಗಳು.
ಇದನ್ನೂ ಓದಿ : ಬಸ್ಸಿಗೆ ಡಿಕ್ಕಿ ಹೊಡೆದ ಸೈಕಲ್ ಸವಾರನ ವಿರುದ್ಧ ದೂರು
ಕಪಗಲ್ ನಿಂದ ಮಾನ್ವಿ ಕಡೆ ಹೊರಟ್ಟಿದ ಖಾಸಗಿ ಸ್ಕೂಲ್ ನ ಬಸ್ ಮತ್ತು ಸಿಂಧನೂರು (Sindhanur) ಕಡೆಯಿಂದ ರಾಯಚೂರು ಕಡೆಗೆ ಹೊರಟಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ (horrific accident). ಎರಡೂ ಬಸ್ ಗಳ ಡಿಕ್ಕಿಯಿಂದ ಸಿಂಧನೂರು- ರಾಯಚೂರು ಮಾರ್ಗದ ರಸ್ತೆ ಬಂದ್ ಆಗಿತ್ತು. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಿಮ್ಸ್ ಆಸ್ಪತ್ರೆಗೆ ಎಸ್ಪಿ ಮತ್ತು ಡಿಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸುದ್ದಿಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂ ಮತ್ತು ಫೇಸ್‌ಬುಕ್ ನಲ್ಲಿ ವೀಕ್ಷಿಸಬಹುದಾಗಿದೆ.
ಇದನ್ನೂ ಓದಿ : ಸೀಮೆ ಎಣ್ಣೆ ಸುರಿದುಕೊಂಡು ಮಹಿಳೆ ಆತ್ಮಹತ್ಯೆ