ಭಟ್ಕಳ: ಅಪ್ರಾಪ್ತ ವಯಸ್ಸಿನ ಬಾಲಕರಿಗೆ ದ್ವಿಚಕ್ರ ವಾಹನ (two wheeler) ಚಲಾಯಿಸಲು ಅವಕಾಶ ನೀಡಿದ ಪ್ರಕರಣದಲ್ಲಿ ಇಬ್ಬರು ವಾಹನ ಮಾಲೀಕರಿಗೆ ಭಟ್ಕಳ (Bhatkal) ಹಿರಿಯ ಸಿವಿಲ್ ನ್ಯಾಯಾಲಯ (court) ತಲಾ ₹25 ಸಾವಿರ ದಂಡ ವಿಧಿಸಿದೆ (fined).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಖಾಜಿಯಾ ಸ್ಟ್ರೀಟ್‌ನ ಮೊಹಮ್ಮದ್ ಯಾಸೀನ್ ಕಝಿಯಾ ಹಾಗೂ ಹನಿಫಾಬಾದ್‌ನ ಅಬ್ದುಲ್ ರುಕ್ನುದ್ದೀನ್ ಅವರು ಅಪ್ರಾಪ್ತರಿಗೆ ತಮ್ಮ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ್ದ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಭರಮಪ್ಪ ಬೆಳಗಲಿ ಅವರು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ ೫ ಹಾಗೂ ೧೯೯(ಎ) ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಭಟ್ಕಳ ಹಿರಿಯ ಸಿವಿಲ್ ನ್ಯಾಯಾಲಯವು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ, ಜುಲೈ ೨ರಂದು ತಲಾ ₹೨೫ ಸಾವಿರ ದಂಡ ವಿಧಿಸಿ ಆದೇಶಿಸಿದೆ (fined).

RNS PU College/ ಮುರುಡೇಶ್ವರದ ಆರ್ ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ