ಭಟ್ಕಳ(bhatkal): ತಾಲೂಕಿನ ಕರಿಕಲ್ ಸಮುದ್ರ ಕಿನಾರೆಯಲ್ಲಿರುವ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ (chathurmasya)ವ್ರತದಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬುಧವಾರ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ (kota poojari) ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಈ ವೇಳೆ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದ ಸಂಸದರಿಗೆ (kota poojari) ಸ್ವಾಮೀಜಿಯವರು ಮಂತ್ರಾಕ್ಷತೆ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮಿ ನಾರಾಯಣ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಇತರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ : ರಂಜಿತಾ ನಾಯ್ಕ ಭಟ್ಕಳ ತಾಲೂಕಿಗೆ ಪ್ರಥಮ