ಭಟ್ಕಳ (Bhatkal): ಭಟ್ಕಳದಲ್ಲಿ ರಂಜಾನ್ ಬಜಾರ್ ಗೆ (Ramadan Market) ಉತ್ತರ ಕನ್ನಡ (Uttara Kannada) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಮುಸಲ್ಮಾನ ಮುಖಂಡರೊಂದಿಗೆ ಭೇಟಿ ನೀಡಿ ಮಾರುಕಟ್ಟೆ ಮಳಿಗೆಗಳನ್ನು ವೀಕ್ಷಣೆ ಮಾಡಿ, ಪೊಲೀಸ್ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಭಟ್ಕಳ ಮಜ್ಲಿಸ್-ಎ-ಇಸ್ಲಾಹ-ಒ-ತಂಜೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ರಬಿತಾ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಅತಿಕುರ್ ರೆಹಮಾನ್ ಮುನಿರಿ ಮತ್ತು ಭಟ್ಕಳ ಪುರಸಭೆಯ ಉಪಾಧ್ಯಕ್ಷ ಅಲ್ತಾಫ್ ಖರೂರಿ ಸೇರಿದಂತೆ ಸಮುದಾಯದ ಮುಖಂಡರು ಎಸ್ಪಿಯನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಎಸ್ಪಿ ನಾರಾಯಣ, ಭಟ್ಕಳ ಮಿನಿ ದುಬೈ ಎಂದೇ ಪ್ರಸಿದ್ಧಿ ಹೊಂದಿದೆ. ರಂಜಾನ್ ಬಜಾರ್ (Ramadan Market)ಗೆ  ನಮ್ಮ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಭದ್ರತೆ ಮಾಡಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಮಾಡಲಾಗಿದೆ ಎಂದರು.

ಇದನ್ನೂ ಓದಿ : Festival / ಶ್ರೀ ರಾಮ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ