ಭಟ್ಕಳ: ಧಾರವಾಡದ (Dharwad) ಕರ್ನಾಟಕ ವಿಶ್ವವಿದ್ಯಾಲಯವು (Karnataka University) ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟ (cross country) ಕ್ರೀಡೆಯಲ್ಲಿ ತಾಲೂಕಿನ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ನಾಯ್ಕ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಮಂಗಳೂರು ವಿಶ್ವವಿದ್ಯಾಲಯದಲ್ಲಿ (Mangaluru University) ಜರಗುವ ಗುಡ್ಡಗಾಡು ಓಟ (cross country) ಕ್ರೀಡೆಯಲ್ಲಿ ಅಂತರ ವಿಶ್ವವಿದ್ಯಾಲಯ-ದಕ್ಷಿಣ ಭಾರತ ವಲಯವನ್ನು ಪ್ರತಿನಿಧಿಸಲಿದ್ದಾರೆ. ಇವರು ಭಟ್ಕಳದ (Bhatkal) ಭಾರತಿ ನಾಯ್ಕ ಹಾಗೂ ವೆಂಕಟೇಶ ನಾಯ್ಕರವರ ಪುತ್ರಿಯಾಗಿದ್ದು, ಇವರ ಈ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ದೈಹಿಕ ಶಿಕ್ಷಕರು, ಸಿಬ್ಬಂದಿ ವರ್ಗ, ಪಾಲಕರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿರುತ್ತಾರೆ.

ಇದನ್ನು ಓದಿ: Biker injured/ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ