ಭಟ್ಕಳ ಡೈರಿ ವರದಿ

ಭಟ್ಕಳ: ಬೆಂಗಳೂರು–ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮುರುಡೇಶ್ವರ ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿರುವುದು ಭಟ್ಕಳ ತಾಲೂಕಿಗೆ ವಿಶೇಷ ಸಂಭ್ರಮದ ಕ್ಷಣವಾಗಿದೆ. ಈ ಹಿನ್ನೆಲೆಯಲ್ಲಿ ರೈಲನ್ನು ಅದ್ದೂರಿಯಾಗಿ ಸ್ವಾಗತಿಸಲು ಬಿಜೆಪಿ ಭಟ್ಕಳ ಮಂಡಲ ಹಾಗೂ ಸಾರ್ವಜನಿಕರ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ನವೆಂಬರ್ ೧೩ರ ಶುಕ್ರವಾರ ಮಧ್ಯರಾತ್ರಿ ೧೨ ಗಂಟೆಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮುರುಡೇಶ್ವರ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದೆ ಎಂದು ಬಿಜೆಪಿ ಭಟ್ಕಳ ಮಂಡಲದ ಪ್ರಕಟಣೆ ತಿಳಿಸಿದೆ.

ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗಮಿಸಲಿದ್ದು, ಪಕ್ಷದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಮಂಡಲದ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ ಮನವಿ ಮಾಡಿದ್ದಾರೆ. ಮುರುಡೇಶ್ವರ ರೈಲು ನಿಲ್ದಾಣದಲ್ಲಿ ನಡೆಯಲಿರುವ ಈ ಸ್ವಾಗತ ಕಾರ್ಯಕ್ರಮದಲ್ಲಿ ಸಾರ್ವಜನಿಕರೂ ಭಾಗವಹಿಸುವಂತೆ ಆಹ್ವಾನಿಸಲಾಗಿದೆ.

ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ

ಇದನ್ನೂ ಓದಿ :

ಬೆಂಗಳೂರು–ಗೋವಾ ವಂದೇ ಭಾರತ್ ರೈಲು: ಭಟ್ಕಳ–ಮುರುಡೇಶ್ವರ ಸೇರಿ ಕರಾವಳಿಗೆ ನೇರ ಸಂಪರ್ಕ

ಮಡಗಾಂವ್-ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ: ಉತ್ತರ ಕನ್ನಡ, ಕರಾವಳಿ ಭಾಗದ ಜನರಿಗೆ ಅನುಕೂಲ