ಭಟ್ಕಳ(Bhatkal) : ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಭಟ್ಕಳದ ಶಕ್ತಿ ಕ್ಷೇತ್ರವಾದ ಸೋಡಿಗದ್ದೆ(Sodigadde) ಮಹಾಸತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ (varamahalaksmi) ಪೂಜೆ ಮತ್ತು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಶುಕ್ರವಾರ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ದೇವಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಇನ್ನು ದೇವಿಯ ದರ್ಶನ ಪಡೆಯಲು ಜಿಲ್ಲೆಯಷ್ಟೇ ಅಲ್ಲದೇ ಹೊರ ಜಿಲ್ಲೆಯಿಂದಲೂ ಭಕ್ತರು ಆಗಮಿಸಿದ್ದರು. ಬೆಳಗಿನಿಂದಲೇ ದೇವಿ ಕ್ಷೇತ್ರದಲ್ಲಿ ಪೂಜೆ ಪುನಸ್ಕಾರಗಳು ನಡೆದವು.
ಇದನ್ನೂ ಓದಿ : ಮುಸ್ಲಿಂ ಮತಗಳಿಂದ ಗೆದ್ದು ಸಚಿವರಾಗಿರುವವರು ಏಕೆ ಸುಮ್ಮನಿದ್ದಾರೆ?
ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ಮಹಿಳಾ ಭಕ್ತರಿಗೆ ಅರಿಶಿಣ, ಕುಂಕುಮ, ಹಸಿರು ಬಳೆ ವಿತರಿಸಲಾಯಿತು. ಮುತ್ತೈದೆಯರಿಗೆ ಉಡಿ ತುಂಬಿಸುವ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ನಡೆಸಲಾಯಿತು. ಮಹಾಸತಿ ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ ಭಕ್ತರು ತಮ್ಮ ಇಷ್ಟಾರ್ಥಗಳನ್ನು ದೇವಿಯ ಮುಂದೆ ನಿವೇದಿಸಿಕೊಂಡರು.
ಇದನ್ನೂ ಓದಿ : ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ವರಮಹಾಲಕ್ಷ್ಮಿ ಪೂಜೆ
ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರಿಗೆ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು. ಸೋಡಿಗದ್ದೆ (sodigadde) ಮಹಾಸತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ ಮತ್ತು ದೇವಿ ದರ್ಶನವನ್ನು ಒಟ್ಟಿಗೆ ಪಡೆದ ಭಕ್ತರು, ಸಂತೃಪ್ತಿಯ ಭಾವನೆ ಅನುಭವಿಸಿದರು.