ಭಟ್ಕಳ (Bhatkal): ಇಲ್ಲಿನ ಮುಠ್ಠಳ್ಳಿ ಗ್ರಾಮದ ಶ್ರೀ ಕಟ್ಟೆವೀರ ಮತ್ತು ಪರಿವಾರ ದೇವರ ೨೩ನೇ ವರ್ಷದ ವಾರ್ಷಿಕ ವರ್ಧಂತ್ಯುತ್ಸವ (Vardhanthi) ಕಾರ್ಯಕ್ರಮವು ಭಕ್ತರ ಹರ್ಷೊದ್ಘಾರಗಳ ನಡುವೆ ಅತಿ ವಿಜೃಂಭಣೆಯಿಂದ ನೇರವೇರಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಬೆಳಿಗ್ಗೆಯಿಂದಲೇ ಶ್ರೀ ಕಟ್ಟೇವೀರ ದೇವರಿಗೆ ಧಾರ್ಮಿಕ ಪೂಜಾ ವಿಧಿವಿಧಾನಗಳು ನಡೆದವು. ಮಧ್ಯಾಹ್ನ ಎಲ್ಲಾ ಕಾರ್ಯಕ್ರಮದ ಬಳಿಕ ಶ್ರೀ ಕಟ್ಟೇವೀರ ದೇವರಿಗೆ ಹಾಗೂ ಪರಿವಾರ ದೇವರಿಗೆ ಮಹಾಪೂಜೆ ಸಲ್ಲಿಸಲಾಯಿತು. ನಂತರ ಮಹಾ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ದೇವರ ಪ್ರಸಾದ ಭೋಜನ ಸ್ವೀಕರಿಸಿದರು. ಸಂಜೆ ೬ ಗಂಟೆಯಿಂದ ರಾತ್ರಿ ೧೦ ಗಂಟೆಯವರೆಗೆ ಸ್ಥಳೀಯ ಪ್ರತಿಭೆಗಳಿಂದ ನಡೆದ ನೃತ್ಯ ಮತ್ತು ವಿವಿಧ ರೀತಿಯ ಮನರಂಜನಾ ಕಾರ್ಯಕ್ರಮಗಳು ಎಲ್ಲರ ಮನಸೆಳೆಯಿತು. ಅಂತರ ಜಿಲ್ಲಾ ಭಜನಾ ಕುಣಿತ ಸ್ಪರ್ಧಾ ಕಾರ್ಯಕ್ರಮ ಭಕ್ತರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು. ಈ ಸಂದರ್ಭದಲ್ಲಿ (Vardhanthi) ಶ್ರೀ ಕಟ್ಟೇವೀರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವ ಸದಸ್ಯರು ಸೇರಿದಂತೆ ಸಾವಿರಾರು ಸಾರ್ವಜನಿಕರು ಪಾಲ್ಗೊಂಡಿದ್ದರು.
ವರ್ಧಂತ್ಯುತ್ಸವ ಕಾರ್ಯಕ್ರಮದ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್‌ಬುಕ್ ನಲ್ಲಿ ವೀಕ್ಷಿಸಬಹುದು.
ವಿಡಿಯೋ ಸಹಿತ ಇದನ್ನೂ ಓದಿ : Childrens Market/ ಸಂತೆಯಾಗಿ ಮಾರ್ಪಟ್ಟ ಶಾಲಾವರಣ