ಭಟ್ಕಳ: ಬೆಂಗಳೂರಿನಲ್ಲಿ (Bengaluru) ನಡೆದ ಸಿಐಎಸ್‌ಸಿಎ (CISCA) ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ (Karate Competition) ಭಾಗವಹಿಸಿದ ಭಟ್ಕಳದ (Bhatkal) ವಿದ್ಯಾಂಜಲಿ ಪಬ್ಲಿಕ್ ಶಾಲೆಯ (Vidyanjali Public School) ನಾಲ್ವರು ವಿದ್ಯಾರ್ಥಿಗಳು ಪದಕ ಗಳಿಸಿದ್ದಾರೆ (achievement in karate). ಈ ಪೈಕಿ ಒಬ್ಬ ವಿದ್ಯಾರ್ಥಿನಿ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾಳೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಭಾನ್ವಿ ಸಿ ನಾಯ್ಕ ಚಿನ್ನದ ಪದಕ ಗಳಿಸಿ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಅದೇ ಪಂದ್ಯಾವಳಿಯಲ್ಲಿ, ಒಂಭತ್ತನೇ ತರಗತಿಯ ವಿಜೇತ್ ಮೊಗೇರ ಬೆಳ್ಳಿ ಪದಕ ಗೆದ್ದರೆ, ಎಂಟನೇ ತರಗತಿ ವಿದ್ಯಾರ್ಥಿಗಳಾದ ರಾಘವೇಂದ್ರ ನಾಯ್ಕ ಮತ್ತು ತುಷಾರ್ ಸಚಿನ್ ಮಹಾಲೆ ಕಂಚಿನ ಪದಕ ಪಡೆದಿದ್ದಾರೆ (achievement in karate). ವಿದ್ಯಾಂಜಲಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯೊಬ್ಬರು ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯ ಪ್ರತಿನಿಧಿಸುತ್ತಿರುವುದು ಇದೇ ಮೊದಲು ಎಂದು ಶಾಲೆಯ ಪ್ರಾಂಶುಪಾಲರು ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Chess/ ಚೆಸ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ



