ಭಟ್ಕಳ (Bhatkal) : ರಾಜ್ಯ ಮಾಹಿತಿ ಹಕ್ಕು (RTI) ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ರಾಜ್ಯ ಸಂಘದಿಂದ ಭಟ್ಕಳದ ನಾಗೇಶ ನಾಯ್ಕ ಹೊನ್ನೆಗದ್ದೆ ಅವರಿಗೆ ವಿಚಾರ ಕ್ರಾಂತಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ (Honour).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ಬೆಂಗಳೂರಿನ (Bengaluru) ನಯನ ಸಭಾಂಗಣದಲ್ಲಿ ಅಯೋಜಿಸಿದ್ದ ಮಾಹಿತಿ ಹಕ್ಕು ದಿನಾಚರಣೆ ಹಾಗೂ ಸಂಘಟನೆಯ 5ನೇ ವರ್ಷದ ವಾರ್ಷಿಕೋತ್ಸವದಲ್ಲಿ ಈ ಸನ್ಮಾನ ನೀಡಿ ಗೌರವಿಸಿದೆ (Honour). ಈ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಉಪಸ್ಥಿತರಿದ್ದರು.

ಇದನ್ನೂ ಓದಿ : Landslide/ ಪತ್ತೆ ಕಾರ್ಯಾಚರಣೆ ಮುಂದುವರಿಸಲು ಒತ್ತಾಯ

ನಾಗೇಶ ನಾಯ್ಕ ಅವರು ಭಟ್ಕಳ ತಾಲೂಕಿನಲ್ಲಿ ಪಂಚಾಯತ ಮಟ್ಟದಲ್ಲಿ ಹೋರಾಟ ಮಾಡಿ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಇದನ್ನು ಗುರುತಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯ ಸಂಘದಿಂದ ಸನ್ಮಾನಿಸಿ ಗೌರವಿಸಲಾಗಿದೆ. ಇವರು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಭಟ್ಕಳ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ : ಹೆಣ್ಣು ಮಕ್ಕಳ ಶಾಲೆಯಲ್ಲಿ ಶಾರದಾ ಪೂಜೆ ಸಂಪನ್ನ