ಭಟ್ಕಳ (Bhatkal): ವಿವಿಧ ಬೇಡಿಕೆ ಈಡೇರಿಕೆಗಾಗಿ ಕಳೆದ ಸೆಪ್ಟಂಬರ್ ತಿಂಗಳಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ (protest) ಹಮ್ಮಿಕೊಂಡ ಸಂದರ್ಭ ನೀಡಿದ ಭರವಸೆಯನ್ನು ಪೂರೈಸದ ಹಿನ್ನೆಲೆಯಲ್ಲಿ ಎರಡನೇ ಬಾರಿ ಮತ್ತೆ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಗೊಂಡಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಪ್ಪುಪಟ್ಟಿ ಧರಿಸಿ ಇಲ್ಲಿನ ತಾಲೂಕು ಘಟಕದಿಂದ ಇಲ್ಲಿನ ಆಟೋ ರಿಕ್ಷಾ ಗಣೇಶೋತ್ಸವ ಮೈದಾನದಲ್ಲಿ  ಅನಿರ್ದಿಷ್ಟಾವಧಿ ಮುಷ್ಕರ (protest) ಕೈಗೊಳ್ಳಲಾಗಿದೆ.

ಇದನ್ನು ಓದಿ : matsyagandha express/ ಮತ್ಸ್ಯಗಂಧ ಎಕ್ಸಪ್ರೆಸ್‌ಗೆ ಎಲ್‌ಎಚ್‌ಬಿ ಕೋಚ್‌

ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು ಹಲವಾರು ಮೂಲಭೂತ ಸಮಸ್ಯೆಗಳಿವೆ. ಮುಖ್ಯವಾಗಿ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಶನ್‌ಗಳ ಮೂಲಕ ಸಮಸ್ಯೆ ಆಗುತ್ತಿದೆ. ಇಲಾಖೆಯಿಂದ ಅಭಿವೃದ್ದಿ ಪಡಿಸಿರುವ ಸುಮಾರು ೧೭ಕ್ಕೂ ಹೆಚ್ಚು ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ವಿಡಿಯೋ ಸಹಿತ ಇದನ್ನು ಓದಿ : Vardhanthi/ ಕಟ್ಟೆವೀರ ದೇವರ ವರ್ಧಂತ್ಯುತ್ಸವ ಸಂಪನ್ನ

ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ, ತಂತ್ರಾಂಶಗಳ ನಿರ್ವಹಣೆಗೆ ಅವಶ್ಯವಾಗಿರುವ ಮೊಬೈಲ್ ಸಾಧನ ಹಾಗೂ ಲ್ಯಾಪ್‌ಟಾಪ್‌ ಮತ್ತು ಅದಕ್ಕೆ ಅವಶ್ಯಕವಾಗಿರುವ ಇಂಟರ್‌ನೆಟ್ ಹಾಗು ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಉಂಟಾಗುತ್ತಿದೆ. ಅದ್ದರಿಂದ ವೃತ್ತಕ್ಕೆ ಒಂದರಂತೆ ಮೊಬೈಲ್, ಲ್ಯಾಪ್‌ಟಾಪ್, ಗೂಗಲ್ ಕ್ರೋಮ್ ಬುಕ್, ಪ್ರಿಂಟರ್, ಇಂಟರ್‌ನೆಟ್‌ ಸೌಲಭ್ಯ ನೀಡಬೇಕು ಎಂದು ಗ್ರಾಮಾಡಳಿತ ಅಧಿಕಾರಿಗಳು ಒತ್ತಾಯಿಸಿದ್ದಾರೆ.

ವಿಡಿಯೋ ಸಹಿತ ಇದನ್ನು ಓದಿ : Childrens Market/ ಸಂತೆಯಾಗಿ ಮಾರ್ಪಟ್ಟ ಶಾಲಾವರಣ

ಕಳೆದ ನಾಲ್ಕು ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಪದೋನ್ನತಿ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ಕೆ.ಸಿ.ಎಸ್.ಆರ್ ನಿಯಮ ೧೫ಎ ರ ಉಪಖಂಡ(೨)ವನ್ನು ಹಿಂಪಡೆದಿರುವುದರಿಂದ ನೌಕರರ ಜೀವನದಲ್ಲಿ ಹಲವಾರು ಸಮಸ್ಯೆಗಳು ಉಂಟಾಗಿರುತ್ತದೆ. ಆದ್ದರಿಂದ ಈ ೧೬ಎ ಉಪಖಂಡ(೨)ನ್ನು ಮರುಸ್ಥಾಪಿಸುವಂತೆ ಅಥವಾ ಕಂದಾಯ ಇಲಾಖೆಯಲ್ಲಿ ಇತರೆ ಎಲ್ಲಾ ಇಲಾಖೆಗಳಲ್ಲಿ ಮಾಡಿರುವಂತೆ ವರ್ಗಾವಣೆಯ ಮಾರ್ಗಸೂಚಿಯನ್ನು ರಚಿಸುವಂತೆ ಸಂಘ ಒತ್ತಾಯಿಸಿದೆ.

ಇದನ್ನು ಓದಿ : Namma Clinic/ ಉಚಿತ ಚಿಕಿತ್ಸಾ ಶಿಬಿರ ಯಶಸ್ವಿ

ಈ ಹಿಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ ಕಳೆದ ವರ್ಷ ಸೆ.೨೬ ರಿಂದ ಹಮ್ಮಿಕೊಳ್ಳಲಾಗಿತ್ತು. ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಅಕ್ಟೋಬರ್ ೩ರಂದು ಪ್ರತಿಭಟನೆ ವಾಪಸ್ಸು ತೆಗೆದುಕೊಳ್ಳಲಾಯಿತು. ಆದರೆ ನಮಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಹೀಗಾಗಿ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಕೇಂದ್ರ ಸಂಘದ ನಿರ್ಣಯದಂತೆ ಮತ್ತೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಗ್ರಾಮ ಆಡಳಿತಾಧಿಕಾರಿ ಸಂಘದ ಜಿಲ್ಲಾ ಅಧ್ಯಕ್ಷ ಚಾಂಬಾಷಾ ತಿಳಿಸಿದ್ದಾರೆ.

ವಿಡಿಯೋ ಸಹಿತ ಇದನ್ನು ಓದಿ : Rathotsava / ಶ್ರೀ ಕ್ಷೇತ್ರ ಕಿತ್ರೆಯಲ್ಲಿ ರಥೋತ್ಸವ ಸಂಪನ್ನ

ಮುಷ್ಕರ ಸ್ಥಳಕ್ಕೆ ಭಟ್ಕಳ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎನ್. ನಾಯ್ಕ ಭೇಟಿ ನೀಡಿ ಮುಷ್ಕರಕ್ಕೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷೆ ಲತಾ ನಾಯ್ಕ, ಗ್ರಾಮ ಆಡಳಿತಾಧಿಕಾರಿಗಳಾದ ಚರಣ ಗೌಡ, ಗಣೇಶ ಕುಲಾಲ, ವೀಣಾ ನಾಯ್ಕ, ತಿಪ್ಪಣ್ಣ, ವಿಜೇತ್, ದಿವ್ಯ, ವಿನುತ, ಭೀಮಣ್ಣ, ಶಬಾನ ಬಾನು, ದೀಕ್ಷಿತ, ಸುನೀಲ, ದೀಪ್ತಿ, ವೀಣಾ, ಐಶ್ವರ್ಯ ಅಶ್ವಿನಿ ಮುಂತಾದವರು ಉಪಸ್ಥಿತರಿದ್ದರು.

ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆಯ ವಿಡಿಯೋವನ್ನು  ಯೂಟ್ಯೂಬ್ಇನ್ಸ್ಟಾಗ್ರಾಂ ಮತ್ತು  ಫೇಸ್‌ಬುಕ್‌  ನಲ್ಲಿ ವೀಕ್ಷಿಸಬಹುದು.

ಇದನ್ನು ಓದಿ : Yakshagana week/ ಪೌರಾಣಿಕ ಯಕ್ಷಗಾನ ಸಪ್ತಾಹಕ್ಕೆ ಚಾಲನೆ