ಭಟ್ಕಳ ಡೈರಿ ವರದಿ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ (revenue department) ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಗ್ರಾಮ ಸಹಾಯಕರ (village assistants) ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ನೇತೃತ್ವದಲ್ಲಿ ಸೋಮವಾರ ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್‌ನಲ್ಲಿ ( Freedom Park) ಬೃಹತ್ ಪ್ರತಿಭಟನೆ (protest) ನಡೆಯಿತು. ಸಂಘದ ರಾಜ್ಯಾಧ್ಯಕ್ಷ ಹಾಗೂ ಸಾಮಾಜಿಕ ಹೋರಾಟಗಾರ ಪ್ರತಾಪ್ ಮದಕರಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಗ್ರಾಮ ಸಹಾಯಕರು (village assistants) ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Scooter accident/ ಭಟ್ಕಳದಲ್ಲಿ ಸ್ಕೂಟರ್ ಅಪಘಾತ: ಗಾಯಗೊಂಡಿದ್ದ ಸವಾರ ಸಾವು

ಗ್ರಾಮೀಣ ಮಟ್ಟದಲ್ಲಿ ಕಂದಾಯ ಇಲಾಖೆಯ ವಿವಿಧ ಕಾರ್ಯಗಳನ್ನು ನಿರ್ವಹಿಸುತ್ತಿರುವ ಗ್ರಾಮ ಸಹಾಯಕರು ಹಲವು ವರ್ಷಗಳಿಂದ ಸಮರ್ಪಕ ವೇತನ, ಸೇವಾ ಭದ್ರತೆ, ನಿವೃತ್ತಿ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆಯಿಂದ ವಂಚಿತರಾಗಿದ್ದಾರೆ. ಸೇವಾ ಹಿರಿತನ ಮತ್ತು ಕರ್ತವ್ಯವನ್ನು ಪರಿಗಣಿಸಿ ಅವರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸರ್ಕಾರದ ವಿವಿಧ ಯೋಜನೆಗಳು ಹಾಗೂ ಕಂದಾಯ ಇಲಾಖೆಯ ಆಡಳಿತಾತ್ಮಕ ಕಾರ್ಯಗಳನ್ನು ಗ್ರಾಮ ಮಟ್ಟದಲ್ಲಿ ಅನುಷ್ಠಾನಗೊಳಿಸುವಲ್ಲಿ ಗ್ರಾಮ ಸಹಾಯಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಹೀಗಿದ್ದರೂ ಅವರನ್ನು ದೀರ್ಘಕಾಲ ತಾತ್ಕಾಲಿಕ ಸ್ವರೂಪದ ಸೇವೆಯಲ್ಲೇ ಮುಂದುವರಿಸುವುದು ಸರಿಯಲ್ಲ ಎಂದು ಸಂಘದ ಮುಖಂಡರು ಹೇಳಿದರು.

cricket tournament/ ಎನ್‌ಎಸ್‌ಸಿ ಚಾಂಪಿಯನ್; ಡಿಡಿಸಿ ದ್ವಿತೀಯ 

ಕನಿಷ್ಠ ವೇತನಕ್ಕೆ ಒತ್ತಾಯ: ಪ್ರಸ್ತುತ ನೀಡಲಾಗುತ್ತಿರುವ ಗೌರವಧನವನ್ನು ಪರಿಷ್ಕರಿಸಿ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ಮಾಸಿಕ ವೇತನವನ್ನು ಜಾರಿಗೊಳಿಸಬೇಕು. ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ ಸೇರಿದಂತೆ ಜೀವನ ನಿರ್ವಹಣೆಗೆ ಅನುಗುಣವಾಗಿ ವೇತನ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸೇವೆಯಲ್ಲಿರುವಾಗ ಗ್ರಾಮ ಸಹಾಯಕರು ಮೃತಪಟ್ಟರೆ ಅವರ ಅರ್ಹ ವಾರಸುದಾರರಿಗೆ ಅನುಕಂಪ ಆಧಾರಿತ ನೇಮಕಾತಿ ನೀಡಬೇಕು. ಮೃತರ ಕುಟುಂಬಕ್ಕೆ ಆರ್ಥಿಕ ನೆರವು ಹಾಗೂ ಸಾಮಾಜಿಕ ಭದ್ರತಾ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಈಗಾಗಲೇ ಮಂಜೂರಾಗಿರುವ ₹೫ ಲಕ್ಷ ಇಡಿಗಂಟಿನ ಹಣವನ್ನು ಅರ್ಹರಿಗೆ ತಕ್ಷಣ ವಿತರಿಸುವುದರ ಜತೆಗೆ ₹೧೦ ಲಕ್ಷ ಇಡಿಗಂಟು, ಡಿ ಗ್ರೂಪ್‌ ದರ್ಜೆ, ಕನಿಷ್ಠ ವೇತನ, ನಿವೃತ್ತಿ ಸೌಲಭ್ಯ, ಅನುಕಂಪ ನೇಮಕಾತಿ, ನಿವೇಶನ ಹಾಗೂ ಶೇ ೩೦ರಷ್ಟು ಮೀಸಲಾತಿ ಸೇರಿದಂತೆ ಎಲ್ಲ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

farmer dies/ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶ: ೬೨ ವರ್ಷದ ಕೃಷಿಕ ಸಾವು

‘ಬೇಡಿಕೆಗಳು ನ್ಯಾಯಯುತ’: ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕೃಷಿ ಸಚಿವ (agriculture minister) ಪಿ ಎಂ ನರೇಂದ್ರಸ್ವಾಮಿ ಅವರು ಮನವಿ ಸ್ವೀಕರಿಸಿ ಮಾತನಾಡಿ, ಗ್ರಾಮ ಸಹಾಯಕರ ಬೇಡಿಕೆಗಳು ನ್ಯಾಯಯುತವಾಗಿವೆ ಎಂದು ಹೇಳಿದರು. ‘ಈ ಹಿಂದೆ ನಾನು ಸದನ ಸಮಿತಿ ಅಧ್ಯಕ್ಷನಾಗಿ ಎರಡು ಬಾರಿ ಕೆಲಸ ಮಾಡಿದ್ದೇನೆ. ಗ್ರಾಮ ಸಹಾಯಕರ ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ನಮಗೆ ಅರಿವಿದೆ. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅವಧಿಯಲ್ಲಿ ಕೆಲವು ನಿರ್ಧಾರಗಳನ್ನೂ ಕೈಗೊಳ್ಳಲಾಗಿದೆ. ಆದರೆ ಆರ್ಥಿಕ ಇಲಾಖೆಯಿಂದ ಅಂತಿಮ ಅನುಮೋದನೆ ದೊರೆಯಬೇಕಿದೆ’ ಎಂದು ಹೇಳಿದರು.

Honnavar BJP/ ಕಾರವಾರದಲ್ಲಿ ಸರಣಿ ಹೋರಾಟಕ್ಕೆ ಹೊನ್ನಾವರ ಬಿಜೆಪಿ ಬೆಂಬಲ

‘ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರ’: ಆರೋಗ್ಯ ಸಚಿವ (health minister) ಯು ಟಿ ಖಾದರ್ ಮಾತನಾಡಿ, ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳನ್ನು ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರೊಂದಿಗೆ ಅಧಿವೇಶನ ಅಥವಾ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

passes away/ ಸಮಾಜ ಸೇವಕ, ಶಿಕ್ಷಣ ಪ್ರೇಮಿ ರವಿ ಖಾರ್ವಿ ನಿಧನ: ಬಾಲ್ಯ ಸ್ನೇಹಿತರ ಕಂಬನಿ

ಮಳೆಯಲ್ಲೇ ಪ್ರತಿಭಟನಾ ಸ್ಥಳಕ್ಕೆ ಸಚಿವರು:

ಕಂದಾಯ ಸಚಿವ (revenue minister) ಜಿ ಪರಮೇಶ್ವರ ಅವರ ಭೇಟಿಗಾಗಿ ಪ್ರತಿಭಟನಾ ಸ್ಥಳದಲ್ಲಿ ಕಾಯುತ್ತಿದ್ದ ಗ್ರಾಮ ಸಹಾಯಕರಿಗೆ ಭಾರಿ ಮಳೆ ಅಡ್ಡಿಯಾಯಿತು. ಈ ವೇಳೆ ಸಚಿವರು ಮಳೆಯ ನಡುವೆಯೇ ಛತ್ರಿ ಹಿಡಿದು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಗ್ರಾಮ ಸಹಾಯಕರ ಪರಿಸ್ಥಿತಿ ಹಾಗೂ ಬೇಡಿಕೆಗಳಿಗೆ ಸಂಬಂಧಿಸಿದ ಕಡತಗಳ ಕುರಿತು ಮಾಹಿತಿ ಪಡೆದುಕೊಂಡರು.

identification/ ಗುರುತು ಪತ್ತೆಗೆ ಸಹಕರಿಸಿ: ಕುಟುಂಬದವರಿಗಾಗಿ ಶೋಧ 

‘ಇನ್ನೂ ನಾಲ್ಕೈದು ದಿನಗಳಲ್ಲಿ ಸಂಘದ ಪ್ರತಿನಿಧಿಗಳಿಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚಿಸಲು ಅವಕಾಶ ಕಲ್ಪಿಸುತ್ತೇನೆ’ ಎಂದು ಸಚಿವ ಜಿ. ಪರಮೇಶ್ವರ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಉಪ ಕಾರ್ಯದರ್ಶಿ ಕಲಾವತಿ ಎಸ್ ಎನ್, ಶಿಗ್ಗಾಂವಿ ಶಾಸಕ ಪಠಾಣ್ ಯಾಸೀರ್ ಅಹ್ಮದ್ ಖಾನ್ ಸೇರಿದಂತೆ ಅಧಿಕಾರಿಗಳು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

fishermen/ ಸಮುದ್ರ ಮಧ್ಯದಲ್ಲಿ ಸಿಲುಕಿದ ಮುರುಡೇಶ್ವರದ ೪ ಮೀನುಗಾರರು