ಕುಮಟಾ: ತಾಲೂಕಿನ ಮಿರ್ಜಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಛತ್ರಕೂರ್ವೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸಾರ್ವಜನಿಕ ರಸ್ತೆಯಲ್ಲಿ ‘ಅಕ್ರಮ’ವಾಗಿ ಗೇಟ್ ಅಳವಡಿಸಿ ಟೋಲ್ ಸಂಗ್ರಹಿಸಲು ಮುಂದಾಗಿರುವ ಪಂಚಾಯತ್ ಆಡಳಿತದ ಕ್ರಮವನ್ನು ಖಂಡಿಸಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ (Villagers outraged). ಈ ಕೂಡಲೇ ಗೇಟ್ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸದಿದ್ದರೆ ಪಂಚಾಯತ್ ಕಚೇರಿ ಮುಂದೆ ಧರಣಿ ಕೂರುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮಿರ್ಜಾನ ಕೋಟೆ (Mirjan Fort) ಕೆಳಭಾಗದಲ್ಲಿರುವ ಛತ್ರಕೂರ್ವೆ ಗ್ರಾಮಕ್ಕೆ ಅನಾದಿಕಾಲದಿಂದಲೂ ಮಿರ್ಜಾನ ಮೂಲಕ ಕೋಟೆಯ ಮಾರ್ಗವಾಗಿ ಸಾಗುವ ರಸ್ತೆಯೇ ಪ್ರಮುಖ ಸಂಪರ್ಕ ಕೊಂಡಿಯಾಗಿದೆ. ಈ ರಸ್ತೆಯು ಲೋಕೋಪಯೋಗಿ ಇಲಾಖೆಯ (PWD) ಕುಮಟಾ ಉಪವಿಭಾಗದ ಅಡಿಯಲ್ಲಿ ನಿರ್ವಹಣೆಯಲ್ಲಿದೆ. ಆದರೆ, ಇತ್ತೀಚೆಗೆ ಮಿರ್ಜಾನ ಗ್ರಾಮ ಪಂಚಾಯತ್ ಆಡಳಿತ ಸಮಿತಿಯು ಸಭೆ ನಡೆಸಿ, ಪ್ರವಾಸಿ ವಾಹನಗಳಿಂದ ಪಾರ್ಕಿಂಗ್ ಶುಲ್ಕ ವಸೂಲಿ ಮಾಡುವ ಉದ್ದೇಶದಿಂದ ಈ ಸಾರ್ವಜನಿಕ ರಸ್ತೆಯಲ್ಲಿ ಟೋಲ್ ಮಾದರಿಯ ಗೇಟ್ ಅಳವಡಿಸಲು ಮುಂದಾಗಿದೆ.
ಇದನ್ನು ಓದಿ: Follow up/ ಅಪಘಾತದಲ್ಲಿ ಭಟ್ಕಳದ ಯುವಕ ಸಾವು ಪ್ರಕರಣ: ಒಬ್ಬ ಗಂಭೀರ, ಮೂವರು ಪಾರು
ಗ್ರಾಮಸ್ಥರ ಆಕ್ಷೇಪಣೆ: ವ್ಯವಸ್ಥೆಗೆ ತಪ್ಪು ಮಾಹಿತಿ ನೀಡಿ, ಮೇಲಾಧಿಕಾರಿಗಳ ನಿರ್ದೇಶನವೆಂದು ಸುಳ್ಳು ಹೇಳಿ ಗೇಟ್ ನಿರ್ಮಿಸಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗೇಟ್ ಅಳವಡಿಕೆಯಿಂದ ಛತ್ರಕೂರ್ವೆ ಗ್ರಾಮದ ನಿವಾಸಿಗಳಿಗೆ, ನಿತ್ಯ ಓಡಾಡುವ ವಿದ್ಯಾರ್ಥಿಗಳಿಗೆ ಹಾಗೂ ತುರ್ತು ವಾಹನಗಳಿಗೆ ಸಂಚರಿಸಲು ಅಡ್ಡಿಯಾಗುತ್ತದೆ. ಕೃತಕವಾಗಿ ವಾಹನ ದಟ್ಟಣೆ ಸೃಷ್ಟಿಸುವುದರಿಂದ ಈ ಕಿರಿದಾದ ರಸ್ತೆಯಲ್ಲಿ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಿದೆ ಎಂದು ಗ್ರಾಮಸ್ಥರು ಆಕ್ಷೇಪಣೆ ಎತ್ತಿದ್ದಾರೆ.
ಇದನ್ನು ಓದಿ: Mahashivaratri/ ಮುರ್ಡೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆ
ಪ್ರವಾಸಿಗರಿಗೆ ಶೌಚಾಲಯ, ಸ್ವಚ್ಛತೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ ಶುಲ್ಕ ಸಂಗ್ರಹಿಸುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಸಾರ್ವಜನಿಕ ರಸ್ತೆಗೆ ಗೇಟ್ ಹಾಕಿ ಗ್ರಾಮಸ್ಥರ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಗ್ರಾಮಸ್ಥರು ವಾದಿಸಿದ್ದಾರೆ.
ಇದನ್ನು ಓದಿ: Car Parking/ ತೆರವಿನ ಭೀತಿಯಲ್ಲಿ ಕಾರು ನಿಲ್ದಾಣ
ಈ ಕುರಿತು ಛತ್ರಕೂರ್ವೆ ಗ್ರಾಮದ ೫೦ಕ್ಕೂ ಹೆಚ್ಚು ಗ್ರಾಮಸ್ಥರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ (PDO) ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಮುಖಂಡ ವಿನಾಯಕ ಪಟಗಾರ, “ಗೇಟ್ ಹಾಕುವುದರಿಂದ ಗ್ರಾಮದ ಜನಜೀವನಕ್ಕೆ ತೊಂದರೆಯಾಗುತ್ತದೆ. ಕೂಡಲೇ ಈ ಕಾಮಗಾರಿ ನಿಲ್ಲಿಸಬೇಕು” ಎಂದು ಒತ್ತಾಯಿಸಿದರು. ಇನ್ನೊಬ್ಬ ಮುಖಂಡ ಶಿವಾನಂದ ಮಾತನಾಡಿ, “ಒಂದೊಮ್ಮೆ ಪಂಚಾಯತ್ ಹಠಮಾರಿ ಧೋರಣೆ ಮುಂದುವರಿಸಿದರೆ ಗ್ರಾಮಸ್ಥರೆಲ್ಲರೂ ಸೇರಿ ಪಂಚಾಯತ್ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದೇವೆ” ಎಂದು ಎಚ್ಚರಿಕೆ ನೀಡಿದರು.
ಇದನ್ನು ಓದಿ: Timely action/ಭಟ್ಕಳದಲ್ಲಿ ನಾಪತ್ತೆಯಾಗಿದ್ದ ಕುಮಟಾ ವ್ಯಕ್ತಿ ತುಮಕೂರಿನಲ್ಲಿ ಪತ್ತೆ
ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ರವಿ, ಚೆನ್ನಪ್ಪ, ಲೋಕೇಶ, ಪುರಸಯ್ಯ, ಗಣೇಶ, ನವೀನ, ಓಮು, ಮಹೆಂದ್ರ ಶಾಂತಿ, ದಾಮೋದರ, ಲಕ್ಷ್ಮಣ, ಗುರುನಾಥ, ರಾಮಚಂದ್ರ ವೆಂಕಟ್ರಮಣ ಹಾಗೂ ಪಂಚಾಯತ್ ಸದಸ್ಯರು ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು.
ಇದನ್ನು ಓದಿ: Hit and run/ ಡಿಕ್ಕಿ ಹೊಡೆದು ಕಾರು ಪರಾರಿ: ಆಟೋರಿಕ್ಷಾ ಪಲ್ಟಿ; ಗರ್ಭಿಣಿ ಸಹಿತ ಆರು ಜನರು ಆಸ್ಪತ್ರೆಗೆ



