ಭಟ್ಕಳ: ತಾಲೂಕಿನ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನ (SGS College) ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ (welcome) ಕಾರ್ಯಕ್ರಮವು ಶ್ರೀ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ ಸೆ ೧೮ರಂದು ಜರುಗಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಹಾಗೂ ಮುಖ್ಯ ಅತಿಥಿಯನ್ನು ಪ್ರಾಂಶುಪಾಲ ಶ್ರೀನಾಥ ಪೈ ಸ್ವಾಗತಿಸಿ (welcome) ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಕಾರ್ಯಕ್ರಮ ಉದ್ಘಾಟಿಸಿದ ಹಾಸ್ಯ ಮತ್ತು ಜೀವನ ಮೌಲ್ಯಗಳ ಉಪನ್ಯಾಸಕಿ ಸಂಧ್ಯಾ ಶೆಣೈ ಉಡುಪಿ, ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ತಂದೆ-ತಾಯಿಯವರ ಶ್ರಮ ಮಹತ್ವದಾಗಿದ್ದು, ವಿದ್ಯಾರ್ಥಿಗಳು ಇದನ್ನರಿತು ಕಾಲೇಜಿನಲ್ಲಿ ಶಿಸ್ತಿನಿಂದಿರುವ ಮೂಲಕ ಯಶಸ್ಸನ್ನು ಸಾಧಿಸಬೇಕು ಎಂದು ಕಿವಿಮಾತು ಹೇಳಿದರು.

ಇದನ್ನು ಓದಿ: Bhatkal bone case/ ಭಟ್ಕಳ ಪುರಸಭೆ ಮುಖ್ಯಾಧಿಕಾರಿ ಸುಳ್ಳು ದೂರು ಕೊಟ್ರಾ?

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ಸಾಹಿತಿ ಶ್ರೀಧರ ಶೇಟ್ ಶಿರಾಲಿ ಮಾತನಾಡಿ, ವಿದ್ಯಾರ್ಥಿಗಳು, ನಿರಂತರ ತಾಳ್ಮೆ ಹಾಗೂ ಪ್ರಯತ್ನದಿಂದ ಜೀವನದಲ್ಲಿ ಗುರಿಯನ್ನು ಸಾಧಿಸಬೇಕೆಂದು ಕರೆ ನೀಡಿದರು.

ಇದನ್ನು ಓದಿ: ೨೪ ಗಂಟೆಯೊಳಗೆ ದೇವಳ ಕಳ್ಳರನ್ನು ಪತ್ತೆಹಚ್ಚುವಲ್ಲಿ ಭಟ್ಕಳ ಗ್ರಾಮೀಣ ಪೊಲೀಸರು ಯಶಸ್ವಿ

ಕಾಲೇಜಿನ ಹಳೆಯ ವಿದ್ಯಾರ್ಥಿ ಹಾಲಿ ಎಲ್ಐಸಿ ಡೆವಲಪ್ಮೆಂಟ್ ಆಫೀಸರ್ ನಾಗರಾಜ ನಾಯ್ಕ ಮಾತನಾಡಿ, ಕಾಲೇಜಿನಲ್ಲಿ ನಡೆಯುವ ಪಠ್ಯವಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವ ಮೂಲಕ ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕೆಂದು ತಮ್ಮ ಕಾಲೇಜಿನ ಜೀವನದ ಅನುಭವಗಳನ್ನು ಹಂಚಿಕೊಂಡರು.

ಇದನ್ನು ಓದಿ: Case filed/ ಭಟ್ಕಳ ಮೂಳೆ ಪ್ರಕರಣಕ್ಕೆ ತಿರುವು: ಪುರಸಭೆ ಮುಖ್ಯಾಧಿಕಾರಿಯಿಂದ ದೂರು

ಭಟ್ಕಳ (Bhatkal) ಎಜುಕೇಶನ್ ಟ್ರಸ್ಟ್ನ ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ ವಿದ್ಯಾರ್ಥಿಗಳಿಗೆ ಶುಭಕೋರಿದರು. ಅಧ್ಯಕ್ಷ ಡಾ ಸುರೇಶ ನಾಯಕ ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡಿದರು. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು. ಅತಿಥಿ ಗಣ್ಯರಿಗೆ ಕಾಲೇಜಿನ ವತಿಯಿಂದ ಗೌರವ ಸಮರ್ಪಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು.

ಇದನ್ನು ಓದಿ: folklorist/ ನಮ್ಮನ್ನಗಲಿದ ಜಾನಪದ ತಜ್ಞ ಡಾ ಎನ್ ಆರ್ ನಾಯಕ

ಉಪನ್ಯಾಸಕ ಸುಬ್ರಹ್ಮಣ್ಯ ನಾಯ್ಕ ವಂದನಾರ್ಪಣೆಗೈದರು. ವಿದ್ಯಾರ್ಥಿನಿಯರಾದ ಆಗ್ನೇಸ್ ರೇಗೋ ಮತ್ತು ನಮೃತಾ ಹುಲ್ಸವಾರ ಕಾರ್ಯಕ್ರಮ ನಿರೂಪಿಸಿದರು.

ಇದನ್ನು ಓದಿ: Doctor died/ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಿದ್ದ ವೈದ್ಯ ಸಾವು