ಧಾರವಾಡ (Dharwad) : ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್‌ ವಾಹನ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಬಳಿ ಮರಕ್ಕೆ ಡಿಕ್ಕಿ ಹೊಡೆದು ಒಬ್ಬರು ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ  ಶನಿವಾರ ರಾತ್ರಿ ನಡೆದಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕ್ರೂಸರ್‌ ವಾಹನದಲ್ಲಿದ್ದ ಒಟ್ಟು ೧೬ ಜನರಿಗೆ ಗಾಯಗಳಾಗಿವೆ. ಈ ಪೈಕಿ ಓರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರೆ, ಇನ್ನೂ  ಮೂವರ ಸ್ಥಿತಿ ಗಂಭೀರವಾಗಿದೆ. ಧಾರವಾಡದ ಹೊಸ ಯಲ್ಲಾಪುರದ ಶಾಂತವ್ವ ನೀರಲಕಟ್ಟಿ ಮೃತರು. ಇವರೆಲ್ಲರೂ  ಕಲಕೇರಿ ಗ್ರಾಮದ ನಿವಾಸಿ ಗದಿಗೆವ್ವ ಹುಲಮನಿ ಅವರ ಅಂತ್ಯಕ್ರಿಯೆಗೆ ಹೊರಟ್ಟಿದ್ದರು ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡ (Dharwad) ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Yakshagana week/ ಪೌರಾಣಿಕ ಯಕ್ಷಗಾನ ಸಪ್ತಾಹಕ್ಕೆ ಚಾಲನೆ