ಯಾದಗಿರಿ: ಗ್ರಾಮೀಣ ಪ್ರದೇಶದ ಪತ್ರಕರ್ತರ ಬಹುದಿನದ ಬೇಡಿಕೆಯಾಗಿದ್ದ ಉಚಿತ ಬಸ್‌ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :  ಫೆ.27ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪತ್ರಕರ್ತರ ಹಿತ ಕಾಯುವಂತಹ ಕಾರ್ಯವನ್ನು ಮಾಡಿದ್ದಾರೆ. ಇದರಿಂದಾಗಿ ನಾಡಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಇರುವ ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಈ ವಿಡಿಯೋ ನೋಡಿ : ಕುರುಕ್ಷೇತ್ರ ಫೈಟರ್ಸ್ ಚಾಂಪಿಯನ್  https://www.facebook.com/share/v/XKXb8NBdiDDiDFfN/?mibextid=oFDknk

ಉಚಿತ ಬಸ್‌ಪಾಸ್ ಸೌಲಭ್ಯವನ್ನು ಕಲ್ಪಿಸುವಂತೆ ಹಲವು ವರ್ಷಗಳ ಕಾಲ ಹೋರಾಟ ಮಾಡಿಕೊಂಡು ಬರಲಾಗುತ್ತಿತ್ತು. ಸಾಕಷ್ಟು ಬಾರಿ ಸಿಎಂ ಅವರಿಗೆ ಮನವಿ ಕೂಡ ಸಲ್ಲಿಸಲಾಗಿತ್ತು. ಸೌಲಭ್ಯ ಕಲ್ಪಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದರು. ಕೊನೆಗೂ ಬದ್ಧತೆ ತೋರ್ಪಡಿಸುವ ಮೂಲಕ ಗ್ರಾಮೀಣ ಪ್ರದೇಶದ ಪತ್ರಕರ್ತರ ಬೆನ್ನಿಗೆ ನಿಂತುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : Accident : ಟಿಪ್ಪರ್ ಬಡಿದು ಮೋಟಾರ್ ಸೈಕಲ್ ಸವಾರ ಸಾವು

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಪರಿಶ್ರಮ ಕೊನೆಗೂ ಸಾರ್ಥಕವಾಗಿದೆ. ಇವರ ಹೋರಾಟದ ಫಲವಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ಅನುಕೂಲವಾಗಲಿದೆ.
ಯಾವುದೇ ರೀತಿಯಿಂದ ಸೌಲಭ್ಯಗಳು ಇಲ್ಲದೇ ಗ್ರಾಮೀಣ ಪ್ರದೇಶದಲ್ಲಿ ಪತ್ರಕರ್ತರು ಹಗಲಿರುಳು ಶ್ರಮಿಸುತ್ತಿದ್ದಾರೆ. ಇದೀಗ ಬಸ್‌ಪಾಸ್ ಸೌಲಭ್ಯ ಕಲ್ಪಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಕರ್ತವ್ಯ ನಿರ್ವಹಿಸಲು ತುಂಬ ಪ್ರಯೋಜನವಾಗಲಿದೆ. ವರದಿಗಾರಿಕೆ ಮಾಡಲು ಹಳ್ಳಿಯಿಂದ ಹಳ್ಳಿಗೆ ಸಾರಿಗೆ ಮೂಲಕ ಸಂಚಾರ ಮಾಡಲು ಅನುಕೂಲವಾಗುತ್ತದೆ. ಬಸ್ ಪಾಸ್ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿಗೊಳಿಸಲು ವಾರ್ತಾ ಇಲಾಖೆ ಕ್ರಮಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಮಲ್ಲಪ್ಪ ಸಂಕೀನ್ ಆಗ್ರಹಿಸಿದ್ದಾರೆ.