ಯಲ್ಲಾಪುರ (Yellapur) : ಡಕಾಯಿತರನ್ನು ಹಿಡಿಯಲು ತೆರಳಿದ್ದ ಪೊಲೀಸರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಪ್ರತಿಯಾಗಿ ಪೊಲೀಸರೂ ದಾಳಿ ನಡೆಸಿದ ಘಟನೆ ನಡೆದಿದೆ. ದುರ್ಷರ್ಮಿಗಳು ಮುಂಡಗೋಡಿನ (Mundgod) ಜಮೀರ್ ಅಹ್ಮದ್ ದುರ್ಗಾವಾಲೆ ಅವರ ಅಪಹರಣದಲ್ಲಿ ಭಾಗಿಯಾದವರು ಎನ್ನಲಾಗಿದೆ. ಖಚಿತ ಮಾಹಿತಿ ಹಿನ್ನೆಲೆ ಮುಂಡಗೋಡ ಮತ್ತು ಯಲ್ಲಾಪುರ (Yellapur) ಪೊಲೀಸರು ದುಷ್ಕರ್ಮಿಗಳನ್ನು ಬೆನ್ನತ್ತಿದ್ದಾಗ ಡೌಗಿನಾಳದಲ್ಲಿ ಘಟನೆ ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮೊನ್ನೆ ಮುಂಡಗೋಡಿನ ಜಮೀರ ಅಹ್ಮದ್ ದುರ್ಗಾವಾಲೆ ಅವರ ಅಪಹರಣವಾಗಿದ್ದು, ದುಷ್ಕರ್ಮಿಗಳು 30 ಲಕ್ಷ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅದಾದ ನಂತರ ಎಚ್ಚರಿಕೆ ನೀಡಿ ಅವರನ್ನು ಬಿಟ್ಟು ತೆರಳಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶುಕ್ರವಾರವೇ ನಾಲ್ವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳಿರುವ ಮಾಹಿತಿ ಹಿನ್ನಲೆ ಮುಂಡಗೋಡು ಮತ್ತು ಯಲ್ಲಾಪುರ ಪೊಲೀಸರು ಕಲಘಟಗಿಯಿಂದ (Kalaghatagi) ದುಷ್ಕರ್ಮಿಗಳನ್ನು ಬೆನ್ನತ್ತಿದ್ದರು. ಯಲ್ಲಾಪುರ ಪೊಲೀಸರು ಡೌಗಿನಾಳದ ಬಳಿ ದುಷ್ಕರ್ಮಿಗಳನ್ನು ಅಡ್ಡಗಟ್ಟಿದಾಗ ದಾಳಿ ಪ್ರತಿ ದಾಳಿ ನಡೆದಿದೆ.
ಇದನ್ನೂ ಓದಿ : ಅನಧಿಕೃತ ಹೋಂ ಸ್ಟೇ ಮೇಲೆ ಜಿಲ್ಲಾಡಳಿತ ಕಣ್ಣು
ಐದು ಜನರಿಗೂ ಶರಣಾಗುವಂತೆ ಪೋಲೀಸರು ತಾಕೀತು ಮಾಡಿದ್ದರು. ಇದಕ್ಕೆ ಒಪ್ಪದ ದುಷ್ಕರ್ಮಿಗಳು ಪೊಲೀಸರ ಕಡೆ ಕಲ್ಲು ಬೀಸಿದ್ದಾರೆ. ಚಾಕು, ಖಾರದ ಪುಡಿಗಳಿಂದ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಗಾಳಿಯಲ್ಲಿ ಎರಡು ಸುತ್ತು ಗುಂಡು ಹೊಡೆದು ಬೆದರಿಸಿದ್ದಾರೆ. ಅದಕ್ಕೂ ಬಗ್ಗದೇ ಇದ್ದಾಗ ಆರೋಪಿತರ ಕಾಲಿಗೆ ಗುಂಡು ಹಾರಿಸಿದ್ದಾರೆ. ಆಗ ಐವರು ಆರೋಪಿತರು ಸಿಕ್ಕಿಬಿದ್ದಿದ್ದು, ಪೊಲೀಸರು ಹಾಗೂ ಡಕಾಯಿತರ ಮೇಲೆ ನಡೆದ ಘರ್ಷಣೆಯಲ್ಲಿ ಮೂವರು ಪೊಲೀಸರಿಗೆ ಗಾಯವಾಗಿದೆ.
ವಿಡಿಯೋ ಸಹಿತ ಇದನ್ನೂ ಓದಿ : ದೇವರ ದರ್ಶನಕ್ಕೆ ವೈಕುಂಠ ದ್ವಾರ
ಮುಂಡಗೋಡು ಸಿಪಿಐ ರಂಗನಥ ನೀಲಮನ್ನವರ, ಪಿಎಸ್ಐ ಪರಶುರಾಮ ಹಾಗೂ ಯಲ್ಲಾಪುರ ಪೊಲೀಸ್ ಸಿಬ್ಬಂದಿ ಶಫಿ ಗಾಯಗೊಂಡಿದ್ದಾರೆ. ಕಾಲಿಗೆ ಗುಂಡು ತಾಗಿಸಿಕೊಂಡ ಆರೋಪಿತರಲ್ಲಿ ಇಬ್ಬರು ಕೊಲೆ ಆರೋಪಿಗಳಾಗಿದ್ದು, ತಿಂಗಳ ಹಿಂದೆ ಜೈಲಿನಿಂದ ಹೊರ ಬಂದಿದ್ದರು. ಐವರಲ್ಲಿ ಇಬ್ಬರು ಡಕಾಯಿತರ ಕಾಲಿನಲ್ಲಿ ಗುಂಡುಗಳಿರುವುದರಿಂದ ಅವರನ್ನು ಕಾರವಾರದ (Karwar) ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ : ೧೪ರಂದು ವನದುರ್ಗಾ ದೇವಿ ಹಬ್ಬ