ಭಟ್ಕಳ (Bhatkal): ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಮುರ್ಡೇಶ್ವರ (Murudeshwar) ರೈಲ್ವೆ ಸ್ಟೇಷನ್ (railway station) ಸಮೀಪ ಪೊಲೀಸರು ವಶಕ್ಕೆ ಪಡೆದಿದ್ದಾರೆ (Young man arrested).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಆರೋಪಿಯನ್ನು ಶಿರಾಲಿಯ ಅಳ್ವೆಕೋಡಿ ನಿವಾಸಿ, ದರ್ಶನ ಜನ್ನಾ ಮೊಗೇರ (21) ಎಂದು ಗುರುತಿಸಲಾಗಿದೆ. ಮುರ್ಡೇಶ್ವರ (Murdeshwar) ಪೊಲೀಸ್ ಠಾಣೆಯ ಪಿಎಸ್‌ಐ ಹಣಮಂತ ಬಿರಾದರ ಮುರ್ಡೇಶ್ವರದ ರೈಲ್ವೆ ಸ್ಟೇಷನ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಅನುಮಾನದ ಮೇಲೆ ಆರೋಪಿ ದರ್ಶನ್ ಹಾಗೂ ಆತನ ಮೋಟಾರ್ ಬೈಕ್ ವಶಕ್ಕೆ ಪಡೆದಿದ್ದಾರೆ (Young man arrested).
ಇದನ್ನು ಓದಿ: Police raid in lodge/ ಮುರುಡೇಶ್ವರದಲ್ಲಿ ಲಾಡ್ಜ್ ಮೇಲೆ ಪೊಲೀಸರ ದಾಳಿ
ವಿಚಾರಣೆಯ ಬಳಿಕ, ಆರೋಪಿಯನ್ನು ಭಟ್ಕಳ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ವೈದ್ಯಕೀಯ ವರದಿಯಲ್ಲಿ ಆರೋಪಿಯು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಪಿಎಸ್‌ಐ ಹಣಮಂತ ಬಿರಾದರ ದೂರು ದಾಖಲಿಸಿಕೊಂಡಿದ್ದು (complaint filed), ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನು ಓದಿ: Engineering College/ ಅಂಜುಮನ್ ಇಂಜಿನಿಯರಿಂಗ್ ಕಾಲೇಜಿನ ಸಿಬ್ಬಂದಿ ಸಾವಿಗೆ ಕಾರಣರಾರು?



