ಭಟ್ಕಳ: ನಗರದ ಗುಳ್ಮಿ ಸುರಂಗದ ಬಳಿ ಬುಧವಾರ ಮಧ್ಯಾಹ್ನ 33 ವರ್ಷದ ಯುವಕ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾನೆ (Youth died) ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಗುಳ್ಮಿ ನಿವಾಸಿ ಮೊಹಮ್ಮದ್ ನಾಸಿರ್ ಶೇಖ್ ಹುಸೇನ್ ಎಂದು ಗುರುತಿಸಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮೃತ ಮಹ್ಮದ್ ನಾಸೀರ್ ಅವರು ಕಳೆದ ಸುಮಾರು ೧೫ ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಕಳೆದ ೩-೪ ವರ್ಷಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿಕೊಂಡು ಹೊರಗೆ ಹೋದವರು, ಕೊಂಕಣ ರೈಲ್ವೆ ಟನಲ್ ಸಮೀಪ ಹಾದು ಹೋಗುತ್ತಿದ್ದ ರೈಲಿಗೆ ಡಿಕ್ಕಿಯಾಗಿದ್ದಾರೆ. ಅಪಘಾತದಲ್ಲಿ ತಲೆ, ಎಡ ಕಣ್ಣು ಹಾಗೂ ಕೈ–ಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನು ಓದಿ: premier league/ ಭಟ್ಕಳ ಟೀಚರ್ಸ್ ಪ್ರೀಮಿಯರ್ ಲೀಗ್ – ಮನವಿ ತಂಡಕ್ಕೆ ಚಾಂಪಿಯನ್ ಕಿರೀಟ
ಪೊಲೀಸರ ಪ್ರಕಾರ, ಮಧ್ಯಾಹ್ನ ಊಟದ ನಂತರ ಮಧ್ಯಾಹ್ನ ೨ ಗಂಟೆ ಸುಮಾರಿಗೆ ಮನೆಯಿಂದ ಹೊರಟು ರೈಲ್ವೆ ಹಳಿಯ ಮೇಲೆ ಅಥವಾ ಅದರ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಮುರ್ಡೇಶ್ವರದಿಂದ (Murudeshwar) ಬೆಂಗಳೂರು (Bengaluru) ಕಡೆಗೆ ಹೋಗುವ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು, ಅವರ ಸಾವು ಸಂಭವಿಸಿದೆ (Youth died).
ಇದನ್ನು ಓದಿ: Suicide/ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ
ಮಧ್ಯಾಹ್ನ ೩.೨೪ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿ, ನಂತರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಈ ಕುರಿತು ಮೃತನ ಅಣ್ಣ ನಚೀಲ್ ಶೇಖ್ ಅವರು ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಇದನ್ನು ಓದಿ: Farewell ceremony/ ಆರ್ ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ



