ಬೆಳಗಾವಿ (Belagavi) : ಮೈಕ್ರೋ ಫೈನಾನ್ಸ್ (Micro Finance) ಸಾಲಬಾಧೆಯಿಂದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಖಾನಾಪುರ (Khanapur) ತಾಲ್ಲೂಕಿನ ಕಕ್ಕೇರಿ ಗ್ರಾಮದ ಜನತಾ ಕಾಲೋನಿ ನಿವಾಸಿ, ಕಟ್ಟಡ ಕಾರ್ಮಿಕ ಗೋವಿಂದ ಗಣಪತಿ ವಡ್ಡರ (೩೪) ಸಾವಿಗೆ ಶರಣಾದ ಯುವಕ. ಮನೆಯಲ್ಲಿಯೇ ಗುರುವಾರ ರಾತ್ರಿ ವಿಷ ಕುಡಿದಿದ್ದ ಗೋವಿಂದ ಅವರು ಶುಕ್ರವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಆ ಮೂಲಕ ಮೈಕ್ರೋ ಫೈನಾನ್ಸ್‌ಗೆ (Micro Finance) ಬೆಳಗಾವಿ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ ೪ಕ್ಕೇರಿದೆ.
ಇದನ್ನೂ ಓದಿ : JEE Mains/ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಆರ್.ಎನ್.ಎಸ್. ಸಾಧನೆ
ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ. ಸೆಂಟ್ರಿಂಗ್ ಕೆಲಸದ ಸಾಮಾಗ್ರಿಗಳ ಖರೀದಿಗೆ ಫೈನಾನ್ಸ್ ನಿಂದ ರೂ. ೬೦ ಸಾವಿರ ಹಾಗೂ ಕುಟುಂಬದವರ ಹೆಸರಿನಲ್ಲಿ ಗ್ರಾಮಾಭಿವೃದ್ದಿ ಸಂಘದಿಂದ ರೂ. ೧ ಲಕ್ಷ ರೂ. ಸಾಲ ಪಡೆದಿದ್ದರು ಎನ್ನಲಾಗಿದೆ. ಸಾಲ ಮರುಪಾವತಿಗಾಗಿ ನೀಡುತ್ತಿದ್ದ ಕಿರುಕುಳ ಸಹಿಸಲಾರದೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಲಾಗಿದೆ. ಖಾನಾಪುರ ತಾಲೂಕಿನ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : Abandoned car/ ಕೋಟಿ ಹಣ ಪತ್ತೆಯಾದ ಕಾರು ದರೋಡೆಯಾಗಿತ್ತು