ಭಟ್ಕಳ: ತಾಲೂಕಾಡಳಿತ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ, ಪಟ್ಟಣ ಪಂಚಾಯತ್ ಜಾಲಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಡಳಿತ ಸೌಧದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಮ್ ಜಯಂತಿಯನ್ನು ಆಚರಿಸಲಾಯಿತು.
ಇದನ್ನೂ ಓದಿ : ಯೋಗಾಸನ ನಿರ್ಣಾಯಕ ರಾಜ್ಯ ಪ್ರಶಸ್ತಿ ಪಡೆದ ಸೀಮಾ ನಾಯ್ಕ
ಕಾರ್ಯಕ್ರಮವನ್ನು ಉಪ ವಿಭಾಗಾಧಿಕಾರಿ ಡಾ. ನಯನಾ ಎನ್. ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಸೀಲ್ದಾರ್ ನಾಗರಾಜ ನಾಯ್ಕಡ ವಹಿಸಿದ್ದರು.
ಡಾ. ಬಿ.ಆರ್. ಅಂಬೇಡ್ಕರ್ ಕುರಿತು ನ್ಯಾಯವಾದಿ ರವೀಂದ್ರ ಎಸ್.ಎಂ., ನ್ಯೂ ಇಂಗ್ಲೀಷ್ ಪಿ.ಯು. ಕಾಲೇಜಿನ ಉಪನ್ಯಾಸಕ ಶಿವಾನಂದ ಭಟ್ಟ ಡಾ. ಜಗಜೀವನ್ ರಾಮ್ ಅವರ ಕುರಿತು ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಭಾರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವಿ.ಡಿ.ಮೊಗೇರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಬೆಳಕೆ ಸಿ.ಆರ್.ಪಿ. ಜಯಶ್ರೀ ಆಚಾರಿ ಪ್ರಾರ್ಥಿಸಿದರು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ ಹೆಗಡೆ ಸ್ವಾಗತಿಸಿದರು, ಜಾಲಿ ಪ.ಪಂ. ಮುಖ್ಯಾಧಿಕಾರಿ ಮಂಜಪ್ಪ ಎನ್. ವಂದಿಸಿದರು. ಸಿ.ಆರ್.ಪಿ. ಸುರೇಶ ಮುರ್ಡೇಶ್ವರ ಕಾರ್ಯಕ್ರಮ ನಿರೂಪಿಸಿದರು.