ಕಾರವಾರ :‌ ಜಿಲ್ಲಾದ್ಯಂತ ಅತಿವೃಷ್ಟಿ ಹಿನ್ನೆಲೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪರಿಶೀಲನಾ ಸಭೆ ನಡೆಸಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ   ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ .

ಜಿಲ್ಲಾದ್ಯಂತ ಭೂಕುಸಿತ ಮತ್ತು ಪ್ರವಾಹದಿಂದ ಹಾನಿಯಾಗಿರುವ ಸ್ಥಳಗಳಲ್ಲಿ ತೆಗೆದುಕೊಂಡಿರುವ ಕ್ರಮದ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು. ಮತ್ತು ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸಮ್ಮುಖದಲ್ಲಿ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಯಲ್ಲಿ ಚರ್ಚೆ ನಡೆಸಿದರು. ಕ್ಷೇತ್ರ ಮಟ್ಟದ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಚರ್ಚಿಸಿದರು.
ಈ ಸಭೆಯಲ್ಲಿ ಶಾಸಕ ಸತೀಶ ಸೈಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ ಮತ್ತು ಜಿಲ್ಲೆಯ ಪ್ರಮುಖ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ರಾಜಾರೋಷವಾಗಿ ಟೋಲ್ ನಲ್ಲಿ ಹಣ ವಸೂಲಿ ಮಾಡುತ್ತೀರಾ…?