ಭಟ್ಕಳ: ತಾಲೂಕಿನ ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತಸಾಗರ ಹರಿದುಬರುತ್ತಿದೆ. ಅಳ್ವೆಕೋಡಿ ದೇವಸ್ಥಾನಕ್ಕೆ ತಂಡೋಪತಂಡವಾಗಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಶನಿವಾರ ಸಾವಿರಾರು ಭಕ್ತರು ಆಗಮಿಸಿ ದೇವಸ್ಥಾನದಲ್ಲಿ ನಡೆಯುವ ವಿವಿಧ ಧಾರ್ಮಿಕ ಕಾರ್ಯಕ್ರಮ ವೀಕ್ಷಿಸಿ, ದೇವಿ ದರ್ಶನ ಮಾಡಿದರು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
೮ನೇ ದಿನದ ಕಾರ್ಯಕ್ರಮ ಪರ್ತಗಾಳಿ ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಶನಿವಾರ ನಡೆದ ಉತ್ಸವದ ಎಂಟನೇ ದಿನದ ಕಾರ್ಯಕ್ರಮದಲ್ಲಿ ಪರ್ತಗಾಳಿ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಹೋಮ ಹವನಗಳಿಗೆ ಲಘು ಪೂರ್ಣಾಹುತಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ತಿಮ್ಮಪ್ಪ ಹೊನ್ನಿಮನೆ, ಧರ್ಮದರ್ಶಿಗಳಾದ ನಾರಾಯಣ ದೈಮನೆ, ಹನುಮಂತ ನಾಯ್ಕ, ಅರವಿಂದ ಪೈ, ಮಾರಿಜಾತ್ರಾ ಮಹೋತ್ಸವದ ಅಧ್ಯಕ್ಷ ರಾಮಾ ಮೊಗೇರ, ಆಡಳಿತ ಮಂಡಳಿಯ ಸದಸ್ಯರು, ಊರಿನ ಪ್ರಮುಖರಿದ್ದರು.
ಇದನ್ನೂ ಓದಿ : ಅವೈಜ್ಞಾನಿಕ ಕಾಮಗಾರಿಯಿಂದ ದೇವಸ್ಥಾನದ ಗರ್ಭಗುಡಿ ಕುಸಿತ
ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಪತಿ ಪೂಜೆ, ಪಂಚದುರ್ಗಾ ಹವನ, ಶ್ರೀ ಸೂಕ್ತ ಹವನ, ಲಕ್ಷ ಕುಂಕುಮಾರ್ಚನೆ ನಡೆಯಿತು. ಮಧ್ಯಾಹ್ನ ಮಹಾಮಂಗಳಾರತಿ, ಅನ್ನಸಂತರ್ಪಣೆ ನೆರವೇರಿತು. ಸಂಜೆ ಭಜನಾ ಕಾರ್ಯಕ್ರಮ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ರಾತ್ರಿ ಮುಂಬೈನ ಸಂತನ್ ಶುಕ್ಲ ಸ್ವರ ಸಪ್ತಕ ಮ್ಯೂಸಿಕ್ ಟ್ರಸ್ಟ್ ಇವರ ಭಕ್ತಿ ಗಾಯನ ಭಕ್ತರ ಮನರಂಜಿಸಿತು.
ಇದನ್ನೂ ಓದಿ : ಕಾಫಿ ಮತ್ತು ರಬ್ಬರ್ ವಲಯದ ಸಾಮಾನ್ಯ ಪಾಲುದಾರರ ಸಭೆ
ಇಂದಿನ ಕಾರ್ಯಕ್ರಮ :
ಭಾನುವಾರ ಉತ್ಸವದ ೯ನೇ ದಿನದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ ೪ ಗಂಟೆಗೆ ಪರ್ತಗಾಳಿ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ. ರಾತ್ರಿ ಸಂಪೂರ್ಣ ದೇವಿ ಮಹಾತ್ಮಯಕ್ಷಗಾನ ಪ್ರದರ್ಶನ ನಡೆಯಲಿದೆ.