ಭಟ್ಕಳ : ನಗರದ ನಾಮಧಾರಿ ಸಭಾಭವನದಲ್ಲಿ ತಾಲೂಕಿನ ಶಿಕ್ಷಣ ಪ್ರೇಮಿಗಳು ಹಾಗೂ ಭಟ್ಕಳ ತಾಲೂಕು ನಾಮಧಾರಿ ಸಮಾಜದ ವತಿಯಿಂದ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ನಂತರದ ಅವಕಾಶಗಳ ಕುರಿತು ಉಚಿತ ಮಾಹಿತಿ ಕಾರ್ಯಾಗಾರ ನಡೆಯಿತು.

ಇದನ್ನೂ ಓದಿ : ಸಮುದ್ರದಲ್ಲಿ ಬೋಟ್ ಮುಳುಗಡೆ; ನಾಲ್ವರ ರಕ್ಷಣೆ

ಕಾರ್ಯಾಗಾರ ಉದ್ಘಾಟಿಸಿದ ನಾಮಧಾರಿ ಸಮಾಜದ ಗುರುಮಠ ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ತಾನದ ಅಧ್ಯಕ್ಷ ಅರುಣ ನಾಯ್ಕ ಮಾತನಾಡಿ, ನಿರ್ದಿಷ್ಟ ಗುರಿಯನ್ನಿಟ್ಟುಕೊಂಡು ಸತತ ಪರಿಶ್ರಮದಿಂದ ಓದಿದರೆ ವಿದ್ಯಾರ್ಥಿಗಳು ಯಶಸ್ಸು ಕಾಣಲು ಸಾಧ್ಯ. ವಿದ್ಯಾರ್ಥಿಗಳು ತಮ್ಮ ಓದಿನೊಂದಿಗೆ ಉತ್ತಮ ಸಂಸ್ಕಾರವನ್ನು ಮೈಗೂಡಿಕೊಳ್ಳಬೇಕು. ತಮ್ಮ ಮನೋರಂಜನಾ ಚಟುವಟಿಕೆಗಾಗಿ ಮೊಬೈಲ್ ಬಳಸದೆ ಶೈಕ್ಷಣಿಕ ಉನ್ನತಿಗಾಗಿ ಉಪಯೋಗಿಸಬೇಕಾಗಿದೆ ಎಂದರು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಿರಾಲಿ ಸಾರದಹೊಳೆ ಹಳೆಕೋಟೆ ಹನುಮಂತ ದೇವಸ್ತಾನದ ಅಧ್ಯಕ್ಷ ಆರ್. ಕೆ. ನಾಯ್ಕ ಮಾತನಾಡಿ, ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ತರವಾದ ಘಟ್ಟವಾಗಿದೆ. ಈ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಬಗ್ಗೆ ಹಚ್ಚು ಗಮನ ಹರಿಸಬೇಕು. ವಿದ್ಯಾರ್ಥಿಗಳು ಈ ಸಮಯದಲ್ಲಿ ಶಿಕ್ಷಣವಲ್ಲದೆ ಇತರ ಚಟುವಟಿಕೆಗಳ ಬಗ್ಗೆ ಗಮನ ಹರಿಸದಂತೆ ಪಾಲಕರೂ ಸಹ ಮಕ್ಕಳ ಬೆನ್ನೆಲುಬಾಗಿ ನಿಲ್ಲಬೇಕು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭವಾನಿಶಂಕರ ನಾಯ್ಕ ಮಾತನಾಡಿ, ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳಲ್ಲಿ ಮುಂದೆ ತಾವು ಯಾವ ಶಿಕ್ಷಣ ಪಡೆದರೆ ಉತ್ತಮ ಎಂಬ ಗೊಂದದಲ್ಲಿರುತ್ತಾರೆ. ಅಂತಹ ವಿದ್ಯಾರ್ಥಿಗಳಿಗೆ ಈ ಉಚಿತ ಮಾಹಿತಿ ಕಾರ್ಯಾಗಾರ ತುಂಬಾ ಉಪಯುಕ್ತವಾಗಿದೆ ಎಂದರು.


ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರು ಶಾರದಾ ವಿದ್ಯಾನಿಕೇತನ ಪಿ.ಯು. ಕಾಲೇಜಿನ ಉಪನ್ಯಾಸಕ ವಿನಾಯಕ ಮಡಿವಾಳ ಹಾಗೂ ಭಟ್ಕಳದ ಸಿದ್ದಾರ್ಥ ಕಾಲೇಜಿನ ಉಪನ್ಯಾಸಕ ಶ್ರೀನಿವಾಸ ನಾಯ್ಕ ಅವರನ್ನು ಸಂಘಟಕರ ಪರವಾಗಿ ಸನ್ಮಾನಿಸಲಾಯಿತು. ಅನನ್ಯ ನಾಯ್ಕ ಪ್ರಾರ್ಥನೆ ಹಾಡಿದರು. ಪಾಂಡುರಂಗ ನಾಯ್ಕ ಸ್ವಾಗತಿಸಿದರು. ಮಂಜುನಾಥ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು. ಸತತ ೩ ಗಂಟೆಗಳ ಕಾಲ ವಿದ್ಯಾರ್ಥಿಗಳಿಗೆ ಮನದಟ್ಟುವ ಹಾಗೆ ಉಪನ್ಯಾಸಕರಿಂದ ಉಪನ್ಯಾಸ ನಡೆಯಿತು.