ಭಟ್ಕಳ: ಭಟ್ಕಳ ತಾಲೂಕಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಕಳೆದ ಬಾರಿಗಿಂತ ಈ ಬಾರಿ ಉತ್ತಮ ಫಲಿತಾಂಶ ದಾಖಲಾಗಿದೆ. ಶೇ. ೯೬ ಫಲಿತಾಂಶ ಬಂದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ.ಮೊಗೇರ ತಿಳಿಸಿದ್ದಾರೆ. ಅವರು ಗುರುವಾರ ಸಂಜೆ ಕ್ಷೇತ್ರಶಿಕ್ಷಣಾಧಿಕಾರಿ ಕಾರ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಕುರಿತು ಮಾಹಿತಿ ನೀಡಿದರು. ಫಲಿತಾಂಶ ತಮಗೆ ತೃಪ್ತಿ ನೀಡಿದೆ ಎಂದರು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ   ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಾದ ಭಾವನಾ ಹಾಗೂ ಹರ್ಷಾನ್ ಶೇ. ೯೮.೮೮ ಅಂಕ ಪಡೆಯುವುದರ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಉಳಿದಂತೆ ಅಂಜುಮನ್ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿಗಳಾದ ಮೈಮುನಾ ಅಜಾಯಿಬ್ ಶೇ.೯೮.೭೨, ಫಾತಿಮಾ ರಿಹಾ ಶೇ. ೯೮.೨೪, ಫಾತಿಮಾ ಸೆರಾ ಗಂಗಾವಳಿ ಶೇ. ೯೮.೦೮, ತೆಂಗಿನಗುಂಡಿಯ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಮನೋಜ್ ಭೈರಾ ಮೊಗೇರ ಹಾಗೂ ಕಿತ್ತೂರು ರಾಣಿ ಚೆನ್ನಮ್ಮಾ ವಸತಿ ಶಾಲೆಯ ನಯನಾ ಗೊಂಡ ಶೇ. ೯೭.೯೨ ಫಲಿತಾಂಶ ಪಡೆದುಕೊಂಡಿದ್ದಾರೆ. ೮ ಸರ್ಕಾರಿ ಪ್ರೌಢಶಾಲೆಗಳು, ೩ ಅನುದಾನಿತ ಶಾಲೆಗಳು ಹಾಗೂ ೭ ಅನುದಾನಿತ ಪ್ರೌಢಶಾಲೆಗಳು ಶೇ.೧೦೦ ಫಲಿತಾಂಶ ದಾಖಲಿಸಿವೆ.

ಇದನ್ನೂ ಓದಿ : ಜಾಲಿ ಸರಕಾರಿ ಪ್ರೌಢಶಾಲೆ ಶೇ. 100 ಫಲಿತಾಂಶ

ಈ ವರ್ಷ ಎಸ್.ಎಸ್.ಎಲ್.ಸಿ. ಫಲಿತಾಂಶ ಉತ್ತಮಗೊಳಿಸಿಕೊಳ್ಳಲು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಮಾರ್ಗದರ್ಶನ ಕಾರ್ಯಗಾರಗಳನ್ನು ಏರ್ಪಡಿಸಲಾಗಿತ್ತು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ತಾಲೂಕು ಮಟ್ಟದಲ್ಲಿ ವಿಶೇಷ ತರಗತಿಗಳನ್ನು ನಡೆಸಲಾಗಿತ್ತು. ವಿಶೇಷವಾಗಿ ಉರ್ದು ಶಾಲೆಗಳಲ್ಲಿ ಫಲಿತಾಂಶವನ್ನು ಹೆಚ್ಚಿಸಿಕೊಳ್ಳಲು ಮುಖ್ಯಾಧ್ಯಾಪಕರು ಮತ್ತು ಶಿಕ್ಷಕರು ಉತ್ತಮ ಪ್ರಯತ್ನ ಮಾಡಿದ್ದಾರೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉರ್ದು ಶಾಲೆಗಳ ಫಲಿತಾಂಶದಲ್ಲಿ ಏರಿಕೆಯಾಗಿದೆ.
– ವಿ.ಡಿ.ಮೊಗೇರ, ಕ್ಷೇತ್ರ ಶಿಕ್ಷಣಾಧಿಕಾರಿ, ಭಟ್ಕಳ

ಇದನ್ನೂ ಓದಿ : ಚಿತ್ರಾಪುರದ ಶ್ರೀವಲಿ ಪ್ರೌಢಶಾಲೆ ೧೦೦% ಫಲಿತಾಂಶ