ಬೈಂದೂರು: ತಾಲೂಕಿನ ಶಿರೂರು ಗ್ರಾಮದ ಮೇಲ್ಪಂಕ್ತಿ ಎಂಬಲ್ಲಿ ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವರ್ಗಾವಣೆ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಲಾಗಿದೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ನಿತಿನ್ ಆಚಾರಿ(16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಬೈಂದೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿರುವ ಈತ, ಪ್ರಸ್ತುತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ. ಸೋಮವಾರ ವರ್ಗಾವಣೆ ಪಡೆಯಲು ಶಾಲೆಗೆ ಹೋದಾಗ ಶಿಕ್ಷಕರು ಬೈದಿದ್ದಾರೆಂದು ಆರೋಪಿಸಲಾಗಿದೆ. ಇದೇ ಕಾರಣಕ್ಕೆ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಗಾಳಿ ಮಳೆಗೆ ಮರ ಬಿದ್ದು ದೇವಸ್ಥಾನ, ಮನೆಗೆ ಹಾನಿ