ಭಟ್ಕಳ : ಕರ್ನಾಟಕ ವಿಶ್ವವಿದ್ಯಾಲಯ ಅಂತರ್ ಮಹಾವಿದ್ಯಾಲಯಗಳ ಏಕವಲಯ ಮಟ್ಟದ ಮಹಿಳಾ ಕಬಡ್ಡಿ ಪಂದ್ಯಾವಳಿಯು ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಶ್ರೀ ಶ್ರೀಧರ ಸ್ವಾಮಿ ಸಭಾಭವನದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಟ್ಕಳ ಶಹರ ಪೋಲಿಸ ಠಾಣೆಯ ಸೈಬರ್ ವಿಭಾಗದ ಪಿ.ಎಸ್.ಐ. ಕೋಕಿಲಾ ಅನುಪ್ ಉದ್ಘಾಟಿಸಿದರು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ನಂತರ ಮಾತನಾಡಿದ ಅವರು, ಪಂದ್ಯದಲ್ಲಿ ಸೋಲು ಗೆಲುವು ಸಮಾನವಾದುದು. ಪಂದ್ಯದಲ್ಲಿ ನಾಯಕತ್ವವನ್ನು ವಹಿಸಿಕೊಳ್ಳುವರು ಅತಿಯಾದ ಆತ್ಮವಿಶ್ವಾಸ ಹೊಂದಿರದೆ ದೃಢ ನಿರ್ಧಾರ ಹಾಗೂ ಸಮನ್ವಯ ಗುಣ ಹೊಂದಿರಬೇಕೆಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಟ್ಕಳ ಎಜುಕೇಶನ್ ಟ್ರಸ್ಟಿನ ಟ್ರಸ್ಟಿ ಸುಮಿತ್ರಾ ಕೌಶಿಕ್, ಟ್ರಸ್ಟಿ ಮ್ಯಾನೇಜರ ರಾಜೇಶ ಬಿ ನಾಯಕ, ಅಧ್ಯಕ್ಷ ಡಾ. ಸುರೇಶ ನಾಯಕ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಹಳೆಯ ವಿದ್ಯಾರ್ಥಿ – ಕ್ರೀಡಾ ಸಾಧಕ ಚರಣರಾಜ ನಾಯ್ಕ ಅವರನ್ನು ಸನ್ಮಾನಿಸಲಾಯಿತು.
ಇದನ್ನೂ ಓದಿ : ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿ, ಬಸ್ ನಿಲ್ದಾಣಕ್ಕೆ ಮುತ್ತಿಗೆ
ಏಕವಲಯ ಮಟ್ಟದ ಮಹಿಳಾ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ವಲಯದ ಹಲವಾರು ತಂಡಗಳು ಭಾಗವಹಿಸಿದ್ದವು. ಕೆ.ಯು.ಡಿ.ಯ ಬಿ.ಪಿ.ಎಡ್ ಕಾಲೇಜು ಪ್ರಥಮ ಸ್ಥಾನ, ಕೆ.ಯು.ಡಿ.ಯ ಪಿಜಿ ಜಿಮ್ಖಾನಾ ದ್ವಿತೀಯ ಸ್ಥಾನ, ಕುಮಟಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಅಕ್ಕಿಆಲೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೃತೀಯ ಸ್ಥಾನ ಪಡೆದವು.
ಇದನ್ನೂ ಓದಿ : ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ
ಪ್ರಾಚಾರ್ಯ ಶ್ರೀನಾಥ ಪೈ ಸ್ವಾಗತಿಸಿ, ಪ್ರಾಸ್ತಾವಿಕ ನುಡಿ ಆಡಿದರು. ಬಿಎ ವಿಭಾಗದ ವಿದ್ಯಾರ್ಥಿಗಳು ನಿರೂಪಣೆ ಮಾಡಿದರು.
ಇದನ್ನೂ ಓದಿ : ಕೋಟೆಬಾಗಿಲು ಸೈಂಟ್ ಥಾಮಸ್ ಶಾಲೆಯಲ್ಲಿ ಪರಿಸರ ದಿನಾಚರಣೆ