ಅಂಕೋಲಾ : ಕಾಮಗಾರಿ ನಡೆಸಿದ ಐ.ಆರ್.ಬಿ. ಕಂಪನಿ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಸ್ಥಳಕ್ಕೆ ಸ್ಥಳೀಯ ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಜೊತೆ ಮಂಕಾಳ ವೈದ್ಯ ಭೇಟಿ ನೀಡಿ ಪರಿಶೀಲಿಸಿದರು. ದುರ್ಘಟನೆ ಸುದ್ದಿ ಕೇಳಿ ಅಧಿವೇಶನದಲ್ಲಿ ಭಾಗಿಯಾಗಿದ್ದ ಮಂಕಾಳ ವೈದ್ಯರು ಶಾಸಕ ಸತೀಶ ಸೈಲ್ ಜೊತೆ ಅಲ್ಲಿಂದ ಹೊರಟಿದ್ದರು.
ಇದನ್ನೂ ಓದಿ : ನೆರೆ ಸೃಷ್ಟಿಸಿದ ಭೀಕರ ಮಳೆ, ಉಕ್ಕಿ ಹರಿದ ನದಿ-ಹಳ್ಳಗಳು
ಈಗಾಗಲೇ ಐದು ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ.
ಮೃತ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಸರಕಾರ ಘೋಷಣೆ ಮಾಡಿದೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ.
ಇದನ್ನೂ ಓದಿ : ೧೮ ಕಾಳಜಿ ಕೇಂದ್ರ, ೮೨೫ ಜನರ ಆಶ್ರಯ
ನಮ್ಮ ಜಿಲ್ಲೆಯಲ್ಲಿ ಇಂತಹ ದುರ್ಘಟನೆ ನಡೆದಿದ್ದು ಮನಸಿಗ್ಗೆ ತುಂಬಾನೇ ನೋವುಂಟು ಮಾಡಿದೆ. ಐ.ಆರ್.ಬಿ. ಕಂಪನಿ ನಡೆಸಿದ ಅವೈಜ್ಞಾನಿಕ ರಸ್ತೆ ಕಾಮಗಾರಿ ಈ ಘಟನೆಗೆ ಕಾರಣವಾಗಿದೆ ಎಂದು ಸಚಿವರು ಹೇಳಿದರು.
ಇದನ್ನೂ ಓದಿ : ಗುಡ್ಡಕುಸಿತ ಹಿನ್ನೆಲೆ ಸಂಚಾರ ಮಾರ್ಗ ಬದಲಾವಣೆ