ಭಟ್ಕಳ : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು(ಏ.೫) ಕಾರ್ಯಕರ್ತರ ಸಭೆಯಲ್ಲಿ ಲೋಕಸಭಾ ಚುನಾವಣೆಯ ಪೂರ್ವ ತಯಾರಿ ಬಗ್ಗೆ  ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಯಿತು. ಕ್ಷೇತ್ರದಲ್ಲಿ ಮತ್ತು ಬೂತ್ ಮಟ್ಟದಲ್ಲಿ ಚುನಾವಣೆಯ ಪ್ರಚಾರ ಬಗ್ಗೆ ಚರ್ಚೆ ನಡೆಯಿತು.

ಇದನ್ನೂ ಓದಿ : ಉತ್ತರ ಕನ್ನಡ ಕ್ಷೇತ್ರದಿಂದ ಸ್ವಾಮೀಜಿ ಸ್ಪರ್ಧೆ : ದಿಢೀರ್ ನಿರ್ಧಾರ ಬದಲು

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಉತ್ತರ ಕನ್ನಡದಲ್ಲಿ ಅನೇಕ ವರ್ಷದಿಂದ ಬಿಜೆಪಿಯಿಂದ ಗೆದ್ದು ಬಂದ ನಾಯಕರು ಸುಳ್ಳು ಮತ್ತು ದ್ವೇಷ ರಾಜಕೀಯ ಮಾಡಿದ್ದಾರೆ. ಇಲ್ಲಿಯ ತನಕ ಅಭಿವೃದ್ದಿ ಮಾತ್ರ ಶೂನ್ಯ. ಬಿಜೆಪಿಯಿಂದ ಗೆದ್ದು ಬರುವ ಅಭ್ಯರ್ಥಿಗಳು ಅವರ ಪಕ್ಷದ ಹಿರಿಯರಿಗೆ ಮಣೆ ಹಾಕುವಲ್ಲೇ ಕಾಲ ಕಳೆಯುತ್ತಾರೆ. ಧೈರ್ಯವಾಗಿ ಜಿಲ್ಲೆಯ ಸಮಸ್ಯೆಗಳನ್ನು ಲೋಕಸಭೆಯಲ್ಲಿ ಧ್ವನಿ ಎತ್ತುವ ಧೈರ್ಯ ಒಬ್ಬರಿಗೂ ಇಲ್ಲ. ಕೇಂದ್ರ ಸರಕಾರದ ಅನುದಾನದಲ್ಲಿ ಜಿಲ್ಲೆಯ ಅಭಿವೃದ್ದಿಗಳು ಆಗಬೇಕೆಂದರೆ ಕಾಂಗ್ರೆಸ್ ಸರಕಾರದಿಂದ ಮಾತ್ರ ಸಾಧ್ಯ. ಆದ್ದರಿಂದ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದರು.

ನೈಜ – ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ, ಮಹಿಳಾ ಅಧ್ಯಕ್ಷೆ ನಯನಾ ನಾಯ್ಕ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಜಯಶ್ರೀ ಮೊಗೇರ, ರಾಮ ಮೊಗೇರ, ಆಲ್ಬರ್ಟ್ ಡಿಕೊಸ್ತಾ, ವಿಷ್ಣು ದೇವಾಡಿಗ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.