ಬನವಾಸಿ : ಯಲ್ಲಾಪುರ ಕ್ಷೇತ್ರದ ಯುವ ಮುಖಂಡ, ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಪುತ್ರ ವಿವೇಕ ಹೆಬ್ಬಾರ ಇಂದು(ಮಾ.೧೧) ಅಧಿಕೃತವಾಗಿ ಅಪಾರ ಬೆಂಬಲಿಗರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ವಿಶ್ವದರ್ಶನ ಪಿಯು ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಫಲಿತಾಂಶ

ಪಟ್ಟಣದ ಟಿ‌.ಎಮ್.ಎಸ್. ಎದುರು ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ವಿವೇಕ ಹೆಬ್ಬಾರ ಅವರಿಗೆ ಪಕ್ಷದ ಶಾಲು ಹಾಕಿ ಬಾವುಟವನ್ನ ನೀಡುವ ಮೂಲಕ ಸೇರ್ಪಡೆ ಮಾಡಿಕೊಂಡಿದ್ದಾರೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ವಿವೇಕ ಹೆಬ್ಬಾರ ಜತೆ ಬನವಾಸಿ ಭಾಗದ ಮುಖಂಡರಾದ ದ್ಯಾಮಣ್ಣ ದೊಡ್ಮನಿ, ಮಂಗಳಾ ನಾಯ್ಕ, ಸಿದ್ದು ನರೇಗಲ್, ರಘು ನಾಯ್ಕ, ಪ್ರಕಾಶ್ ಹೆಗಡೆ, ಗಣಪತಿ ನಾಯ್ಕ ಬಾಶಿ, ಪ್ರಶಾಂತ್ ಗೌಡರ್, ಜಿ.ವಿ ಹೆಗಡೆ, ಸುಭಾಷ್ ಮಡಿವಾಳ, ನಾಗೇಂದ್ರ ಮಡಿವಾಳ, ಸತೀಶ ನಾಯ್ಕ, ಸುರೇಶ್ ಗಡಿಗೇರಿ, ಸೇರಿದಂತೆ ಬನವಾಸಿ ಭಾಗದ ಹತ್ತು ಪಂಚಾಯತ್ ಗಳಲ್ಲಿ ಬಿಜೆಪಿ ಪಕ್ಷದಲ್ಲಿ ಸಕ್ರಿಯರಾಗಿದ್ದ ನೂರಾರು ಜನರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ, ಸಿ.ಎಫ್ ನಾಯ್ಕ, ವೆಂಕಟೇಶ ಹೆಗಡೆ ಹೊಸಬಾಳೆ, ಆರ್ ಹೆಚ್ ನಾಯ್ಕ, ಸೇರಿದಂತೆ ಹಲವರು ಉಪಸ್ಥಿತರಿದ್ದರು.