ವಿಜಯಪುರ: ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಜಮೀನಿನಲ್ಲಿ ಬುಧವಾರ ಸಂಜೆ ಎರಡು ವರ್ಷದ ಗಂಡು ಮಗು ಕೊಳವೆ ಬಾವಿಗೆ ಬಿದ್ದಿದ್ದಾನೆ.
ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಜಮೀನಿನಲ್ಲಿ ಈ ಅವಘಡ ನಡೆದಿದೆ.
ಇದನ್ನೂ ಓದಿ : ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು
ಸತೀಶ್ ಮತ್ತು ಪೂಜಾ ದಂಪತಿಯ ಪುತ್ರ ಸಾತ್ವಿಕ್ ಮುಜಗೊಂಡ (೨) ಆಟವಾಡಲು ಹೋಗಿದ್ದ ವೇಳೆ ಆಯತಪ್ಪಿ ಕೊಳವೆಬಾವಿಗೆ ಬಿದ್ದಿದ್ದಾನೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಮಗುವಿನ ಅಜ್ಜ ಶಂಕರಪ್ಪ ಮುಜಗೊಂಡ ಎಂಬುವರು ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿದ್ದರು. 500 ಅಡಿಯಷ್ಟು ಕೊರೆದರೂ ನೀರು ಬಂದಿರಲಿಲ್ಲ. ಹಾಗಾಗಿ ಮುಚ್ಚದೇ ಹಾಗೆಯೇ ಬಿಟ್ಟಿದ್ದರು ಎನ್ನಲಾಗಿದೆ. ಈಗ ಅವರ ಮೊಮ್ಮಗನೇ ಈ ಕೊಳವೆ ಬಾವಿಗೆ ಬದ್ದಿದ್ದಾನೆ.
ಇದನ್ನೂ ಓದಿ : ಜೆಡಿಎಸ್ – ಬಿಜೆಪಿ ಶತ್ರುಗಳಲ್ಲ : ಆರ್. ವಿ. ದೇಶಪಾಂಡೆ
ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕೊಳವೆ ಬಾವಿಯಲ್ಲಿರುವ ಮಗುವಿಗೆ ಆಕ್ಸಿಜನ್ ಪೂರೈಸಲು ಯತ್ನ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಇಂಡಿ ಗ್ರಾಮಸ್ಥರು ಸ್ಥಳಕ್ಕೆ ಜಮಾಯಿಸಿದ್ದಾರೆ. ಇಂಡಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.