ಕುಮಟಾ: “ಪ್ರತಿ ಮಳೆಗಾಲ ಗುಡ್ನಕಟ್ಟು ಹೊಳೆಗೆ ನೆರೆಬಂದು ನಾವು ಮನೆಬಿಟ್ಟು ಕಾಳಜಿ ಕೇಂದ್ರ ಸೇರಬೇಕಾಗುತ್ತದೆ. ೧೯೮೨ ರಿಂದ ಈ ಪರಿಸ್ಥಿತಿಯನ್ನು ನಾವು ಎದುರಿಸುತ್ತಿದ್ದೇವೆ. ಇಂತಹ ಪರಿಸ್ಥಿತಿ ಬರದಂತೆ ಹಾಗೂ ಮಳೆಗಾಲದ ಸಮಯದಲ್ಲಿ ಎಲ್ಲರಂತೆ ನಾವು ನಮ್ಮ ನಮ್ಮ ಮನೆಯಲ್ಲೇ ಉಳಿದುಕೊಳ್ಳುವಂತೆ ಮಾಡುವುದಕ್ಕಾಗಿ ಗುಡ್ನಕಟ್ಟು ಹೊಳೆಗೆ ಶಾಶ್ವತ ತಡೆಗೋಡೆ ನಿರ್ಮಿಸಿಕೊಡಿ.”

ಕೋನಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರದಲ್ಲಿ ಉಳಿದಿರುವ ಜನರು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರಲ್ಲಿ ಮಾಡಿಕೊಂಡ ಮನವಿಯಿದು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಜನರ ಅಹವಾಲು ಕೇಳಿದ ಸಚಿವರು ಮಾತನಾಡಿ, ಕಾಳಜಿ ಕೇಂದ್ರದಲ್ಲಿರುವವರಿಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಕಟುನಿಟ್ಟಿನ ಸೂಚನೆಯನ್ನು ನೀಡಲಾಗಿದೆ ಎಂದರು. ಇನ್ನು ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ : ಅಂಕೋಲಾ ಸಹಿತ ಎಲ್ಲ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಈ ಸಂದರ್ಭದಲ್ಲಿ ತಹಶೀಲ್ದಾರ್ ಪ್ರವೀಣ ಕರಾಂಡೆ, ತಾ.ಪಂ. ಇ.ಒ ರಾಜೇಂದ್ರ ಎಲ್. ಭಟ್, ಲೋಕೋಪಯೋಗಿ ಮತ್ತು ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ  ಕಾಂಗ್ರೆಸ್ ಮುಖಂಡರಾದ ರತ್ನಾಕರ ನಾಯ್ಕ, ಭಾಸ್ಕರ್ ಪಟಗಾರ ಇದ್ದರು.