ಭಟ್ಕಳ: ಗೂಳಿ ದಾಳಿಗೆ ಶಾಲೆಗೆ ಬರುತ್ತಿದ್ದ ಬಾಲಕನೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಗುಳ್ಮಿ ರೈಲ್ವೆ ಸೇತುವೆ ಸಮೀಪ ನಡೆದಿದೆ.

ಇದನ್ನೂ ಓದಿ : ಶೀಗೆ ಹನುಮಂತ ದೇವರ ಪುನರ್ ಪ್ರತಿಷ್ಠೆ ೨೨ರಂದು

ಗೂಳಿ ದಾಳಿಗೆ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಗುಳ್ಮಿ ನಿವಾಸಿ ನಾಗಾರ್ಜುನ ಎಂದು ಗುರುತಿಸಲಾಗಿದೆ. ಈತ ಇಲ್ಲಿನ ಮಣ್ಕುಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೪ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ. ಈತ ಎಂದಿನಂತೆ ಬೆಳಿಗ್ಗೆ ಮನೆಯಿಂದ ಶಾಲೆಗೆಂದು ಬರುವ ವೇಳೆ ಇಲ್ಲಿನ ರೈಲ್ವೆ ಸೇತುವೆ ಸಮೀಪ ಏಕಾಏಕಿ ಗೂಳಿಯೊಂದು ಬಾಲಕನ ಮೇಲೆ ದಾಳಿ ಮಾಡಿದೆ.

ಇದನ್ನೂ ಓದಿ : ಭಾಗಶಃ ಕಾಡು ಬೆಂಕಿಯ ಕೆನ್ನಾಲಿಗೆಗೆ ಆಹುತಿ

ಗೂಳಿ ದಾಳಿಗೆ ಯುವಕನ ಕಾಲಿಗೆ ಗಂಭೀರವಾಗಿ ಗಾಯವಾಗಿದೆ. ತಕ್ಷಣ ಆತನನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ : ಶಿರಸಿ ಮಾರಿಕಾಂಬಾ ಜಾತ್ರೆಗೆ ಹೆಚ್ಚುವರಿ ಬಸ್  https://www.facebook.com/share/p/GmApGscBk3f3syrx/?mibextid=oFDknk