ಕಾರವಾರ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಮಂಗಳವಾರ ಡಾ.ಅಂಜಲಿ ಸಹಿತ ಮೂವರಿಂದ ಒಟ್ಟು ೪ ನಾಮಪತ್ರಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ : ಶರಾವತಿ ಆರತಿ ೧೮ರಂದು ; ಹೇಗಿರಲಿದೆ ಕಾರ್ಯಕ್ರಮ?

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಉತ್ತಮ ಪ್ರಜಾಕೀಯ ಪಕ್ಷದಿಂದ ಸುನೀಲ ಪವಾರ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ (೨ ನಾಮಪತ್ರ), ಉತ್ತಮ ಪ್ರಜಾಕೀಯ ಪಕ್ಷದ ಸುನೀಲ್ ಪವಾರ್ ಹಾಗೂ ಪಕ್ಷೇತರ ಅಭ್ಯರ್ಥಿ ನಾಗರಾಜ ಶಿರಾಲಿ ತಲಾ ಒಂದು ಸೇರಿದಂತೆ ಒಟ್ಟು ಮೂವರಿಂದ ನಾಮಪತ್ರ ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ ಇದುವರೆಗೆ ೧೦ ಅಭ್ಯರ್ಥಿಗಳಿಂದ ೧೪ ನಾಮಪತ್ರಗಳು ಸಲ್ಲಿಕೆಯಾಗಿವೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ನಾಮಪತ್ರಗಳ ಸಲ್ಲಿಕೆಗೆ ಏಪ್ರಿಲ್ ೧೯ ಕೊನೆಯ ದಿನವಾಗಿದೆ. ೨೦ ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ೨೨ ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ ೭ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.