ಭಟ್ಕಳ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಿದೆ. ಪರೀಕ್ಷೆ ಬರೆದವರಲ್ಲಿ ಒಟ್ಟಾರೆ ಶೇಕಡ ೮೧.೧೫ ಮಂದಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಹೊಸದಾಗಿ ಪರೀಕ್ಷೆ ಬರೆದವರು ಶೇ.೮೪.೫೯ ಫಲಿತಾಂಶ ದಾಖಲಿಸಿದ್ದಾರೆ.

ಇದನ್ನೂ ಓದಿ : ಕನ್ಯಾಡಿಯ ಶ್ರೀರಾಮ ಕ್ಷೇತ್ರದಲ್ಲಿ ಬ್ರಹ್ಮರಥೋತ್ಸವ ೧೭ರಂದು

ಉತ್ತರ ಕನ್ನಡ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ೪ನೇ ಸ್ಥಾನ ಪಡೆದುಕೊಂಡಿದೆ. ಈ ಸಲ ಶೇ. ೯೨.೫೧ ಫಲಿತಾಂಶ ಬಂದಿದೆ. ಕಳೆದ ವರ್ಷ ೯೮.೭೪ ಫಲಿತಾಂಶವನ್ನು ಉತ್ತರ ಕನ್ನಡ ಪಡೆದುಕೊಂಡಿತ್ತು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ದಕ್ಷಿಣ ಕನ್ನಡ ಜಿಲ್ಲೆ ಎಂದಿನಂತೆ ಮೊದಲ ಸ್ಥಾನದಲ್ಲಿದ್ದು, ಶೇ.೯೭.೩೭ ಫಲಿತಾಂಶ ಪಡೆದುಕೊಂಡಿದೆ. ನಂತರದ ಸ್ಥಾನದಲ್ಲಿ ಉಡುಪಿ ಇದ್ದು, ಶೇ.೯೬.೮೦ ಫಲಿತಾಂಶ ಗಳಿಸಿದೆ. ಮೂರನೇ ಹಾಗೂ ನಾಲ್ಕನೇ ಸ್ಥಾನಗಳಲ್ಲಿ ವಿಜಯಪುರ (ಶೇ.೯೪.೮೯) ಹಾಗೂ ಉತ್ತರ ಕನ್ನಡ (ಶೇ.೯೨.೫೧) ಇವೆ. ಕೊನೆಯ ಸ್ಥಾನದಲ್ಲಿ ಗದಗ (ಶೇ.೭೨.೮೬) ಪಡೆದಿದೆ. ಬೆಂಗಳೂರು ಉತ್ತರ ಶೇ.೮೮.೬೭ ಹಾಗೂ ಬೆಂಗಳೂರು ದಕ್ಷಿಣ ಶೇ.೮೯.೫೭ ಫಲಿತಾಂಶ ದಾಖಲಿಸಿವೆ.

ಗಣಿತದಲ್ಲಿ ೬೯೬೦ ಮಂದಿ, ಜೀವಶಾಸ್ತ್ರದಲ್ಲಿ ೫೯೨೫ ಮಂದಿ, ೨೫೭೦ ಮಂದಿ ಕನ್ನಡದಲ್ಲಿ , ೧೪೯೯ ಮಂದಿ ಸಂಸ್ಕೃತದಲ್ಲಿ , ಅರ್ಥಶಾಸ್ತ್ರದಲ್ಲಿ ೧೪೦೩ ಮಂದಿ, ಗಣಕ ವಿಜ್ಞಾನದಲ್ಲಿ ೨೬೬೧ ಮಂದಿ ನೂರಕ್ಕೆ ನೂರು ಅಂಕಗಳನ್ನು ಗಳಿಸಿದ್ದಾರೆ.

ರಾಜ್ಯಾದ್ಯಂತ ೨೦೨೪ರ ದ್ವಿತೀಯ ಪಿಯುಸಿಗೆ ೬೯೮೬೨೭ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ ೩೩೦೬೪೪ ಬಾಲಕರು, ೩೬೭೯೮೦ ಬಾಲಕಿಯರು ಪರೀಕ್ಷೆಯನ್ನು ಬರೆದಿದ್ದಾರೆ.

ರಾಜ್ಯಾದ್ಯಂತ ಪಿಯು ಪರೀಕ್ಷೆಯು ೧೧೨೪ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ೨೦೨೩-೨೪ನೇ ಸಾಲಿನಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷಾ ಕ್ರಮದಲ್ಲಿ ೮೦+೨೦ ಮಾದರಿಯಂತೆ (೮೦ ಅಂಕಗಳಿಗೆ ಲಿಖಿತ ಪರೀಕ್ಷೆ ಮತ್ತು ೨೦ ಅಂಕಗಳಿಗೆ ಆಂತರಿಕ ಮೌಲ್ಯಮಾಪನ) ಅಂಕಗಳನ್ನು ನೀಡಲಾಗಿರುತ್ತದೆ. ಮಾ.೨೫ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಮೌಲ್ಯಮಾಪನ ಕಾರ್ಯ ಮುಗಿದ ಬಳಿಕ ಅಂಕಗಳನ್ನು ಕಂಪ್ಯೂಟರೀಕರಣಗೊಳಿಸಲಾಗಿದೆ. ಅಧಿಕೃತ ವೆಬ್ ಸೈಟ್ https://karresults.nic.in ಇದರಲ್ಲಿ ದ್ವಿತೀಯ ಪಿಯು ಫಲಿತಾಂಶ ಲಭ್ಯವಿದೆ.