ಭಟ್ಕಳ: ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಗ್ರೇಡ್-೨ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ನಾಗರಾಜ ಬಿ. ಪಟಗಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಇತ್ತೀಚೆಗೆ ನಡೆದ ಸಭೆಯಲ್ಲಿ ಹಾಜರಿದ್ದ ಸದಸ್ಯರು ಅವಿರೋಧವಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದಾರೆ. ಮಾವಿನಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗರಾಜ ಬಿ. ಪಟಗಾರ ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ ರಾಮದಾಸ ಆಗೇರ, ಉಪಾಧ್ಯಕ್ಷರಾಗಿ ತಾರಾ ನಾಯ್ಕ, ಖಜಾಂಚಿಯಾಗಿ ತಿಮ್ಮಪ್ಪ ಗೊಂಡ, ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ ಗೌಡ ನೇಮಕಗೊಂಡಿದ್ದಾರೆ‌. ಕಾರ್ಯಕಾರಿ ಸದಸ್ಯರಾಗಿ ಗಣಪತಿ ನಾಯ್ಕ, ಧರ್ಮಾ ನಾಯ್ಕ, ಸಂತೊಷ ನಾಯ್ಕ, ರಾಮಾ ಮೊಗೇರ ಮುಂತಾದವರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ : ಬಾಯಿ ಮತ್ತು ಹಲ್ಲುಗಳ ಆರೋಗ್ಯ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ