ಮೈಸೂರು : ಇಂದು(ಮೇ ೧೫) ಬೆಳಗ್ಗೆ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಿವಮೊಗ್ಗದ ಹೆಸರಾಂತ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ನಾಮಪತ್ರ ಸಲ್ಲಿಸಿದರು.

ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಪ್ರಾದೇಶಿಕ ಆಯುಕ್ತರಿಗೆ ನಾಮಪತ್ರವನ್ನು ಡಾ.ಧನಂಜಯ ಸರ್ಜಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹಾಜರಿದ್ದರು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ   ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಇದಕ್ಕೂ ಮುನ್ನ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ತಾಯಿ ರೇಣುಕಮ್ಮ , ಪತ್ನಿ ನಮಿತಾ ಸರ್ಜಿ ಅವರೊಂದಿಗೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಬಿಜೆಪಿ ಹಿರಿಯ ಮುಖಂಡ ಎನ್.ಜೆ.ರಾಜಶೇಖರ್ ( ಸುಭಾಷ್) ಸೇರಿದಂತೆ ಕುಟುಂಬದ ಸದಸ್ಯರು, ಬಂಧುಗಳು, ಹಿತೈಷಿಗಳು ಭಾಗಿಯಾಗಿದ್ದರು. ಅಲ್ಲದೇ ‌ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ ಜಿಲ್ಲೆಗಳ ನೂರಾರು ಕಾರ್ಯಕರ್ತರು ಹಾಜರಿದ್ದರು.

ಇದನ್ನೂ ಓದಿ : ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಸಾವು