ಭಟ್ಕಳ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲ ಸಂಘ ಭಟ್ಕಳ, ಅರಣ್ಯ ಇಲಾಖೆ, ಅಭಿಯೋಜನಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಗರದ ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಕಾರ್ಯಕ್ರಮವನ್ನು ನ್ಯಾಯಾಲಯದ ಆವರಣದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕರಣಿ ಮಾತನಾಡಿ, ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಅಧ್ಯಕ್ಷತೆಯನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ ಪಿ.ಬಿ. ವಹಿಸಿದ್ದರು.

ಇದನ್ನೂ ಓದಿ : ಕೋಟೆಬಾಗಿಲು ಸೈಂಟ್ ಥಾಮಸ್ ಶಾಲೆಯಲ್ಲಿ ಪರಿಸರ ದಿನಾಚರಣೆ

ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ಗಣೇಶ ಎಂ. ದೇವಡಿಗ, ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ದೀಪಾ ಅರಳಗುಂಡಿ, ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಧನವತಿ, ಸಹಾಯಕ ಸರಕಾರಿ ಅಭಿಯೋಜಕರಾದ ಸೀತಾರಾಮ ಹರಿಕಂತ್ರ, ವಿವೇಕ ನಾಯ್ಕ, ಶೇಖರ ಹರಿಕಂತ್ರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ ಪಿ.ಬಿ., ವಲಯ ಅರಣ್ಯಾಧಿಕಾರಿ ಶರತ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಶಂಕರ ಕೆ.ನಾಯ್ಕ, ನಾಗರಾಜ ಈ.ಎಚ್., ಎಸ್.ಜೆ. ನಾಯ್ಕ, ಉಪಾಧ್ಯಕ್ಷ ಈಶ್ವರ ನಾಯ್ಕ, ಕಾರ್ಯದರ್ಶಿ, ನಾಗರಾಜ ನಾಯ್ಕ, ವಿ.ಎ.ಅಕ್ಕಿವಳ್ಳಿ, ರವೀಂದ್ರ, ಆರ್.ಜಿ. ನಾಯ್ಕ, ನ್ಯಾಯಾಲಯದ ಸಿಬ್ಬಂದಿ ಭಾಗವಹಿಸಿದ್ದರು.

ಇದನ್ನೂ ಓದಿ : ಜೂನ್‌ ೬ರಂದು ರಾಜ್ಯದ ವಿವಿಧೆಡೆ ಅಡಿಕೆ ಧಾರಣೆ