ಕಾರವಾರ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದ ಬಸ್ ಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಮತ್ತು ವಾಪಸ್ ಮರಳಲು ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.
ಇದನ್ನೂ ಓದಿ : ಸುಬ್ರಹ್ಮಣ್ಯ : ನಾಗರನಿಂದ ಮಗುವನ್ನು ರಕ್ಷಿಸಿದ ನಾಯಿ
ಅವರು ಇಂದು(ಫೆ.೨೭) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ಈ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ, ಉಚಿತವಾಗಿ ಪ್ರಯಾಣ ಮಾಡಬಹುದು. ಜಿಲ್ಲೆಯ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.
ಇದನ್ನೂ ಓದಿ : ೭ನೇ ವೇತನ ಆಯೋಗ ವರದಿ ಬಂದ ನಂತರ ತೀರ್ಮಾನ- ಸಿದ್ದರಾಮಯ್ಯ
ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಸ್ಮಾರ್ಟ್ ವಾಚ್, ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಎಲ್ಲಾ ವಿದ್ಯಾರ್ಥಿಗಳು ಸಾಕಷ್ಟು ಮುಂಚಿತವಾಗಿ ಆಗಮಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.
ಇದನ್ನೂ ಓದಿ : ಭಾರತೀಯ ಸಂಸ್ಕೃತಿಯ ಆಚರಣೆಯಲ್ಲಿ ವಿಶಿಷ್ಟ ಅರ್ಥ: ಜಡೆ ಸ್ವಾಮೀಜಿ
ಪರೀಕ್ಷೆಯ ಅವಧಿಯಲ್ಲಿ ಪ್ರಶ್ನೆಪತ್ರಿಕೆಗಳ ಕುರಿತಂತೆ , ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಗೊಂದಲಕ್ಕೀಡು ಮಾಡುವಂತಹ ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗಳು, ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ಪ್ರದೇಶವನ್ನು ಸೆಕ್ಷನ್ 144 ರಂತೆ ನಿಷೇದಾಜ್ಞೆ ವಿಧಿಸುವುದರ ಜೊತೆಗೆ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಬೇಕು ಎಂದು ಸೂಚನೆ ನೀಡಿದ್ದಾರೆ.
ಈ ವಿಡಿಯೋ ನೋಡಿ : ಸರ್ಕಾರಿ ಶಾಲೆಯಲ್ಲಿ ಇಕೋ ಪಾರ್ಕ್ https://fb.watch/qtKMF02ZY1/?mibextid=Nif5oz