ಬೆಂಗಳೂರು : ಪ್ರಥಮ ಪಿಯುಸಿ ಪೂರಕ ಪರೀಕ್ಷೆ ಮೇ 20ರಿಂದ 31ರವರೆಗೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ.
ವೋಟ್ ಮಾಡಿ : ಉತ್ತರ ಕನ್ನಡ ಕ್ಷೇತ್ರದ ಸಂಸದರು ಯಾರಾಗಬೇಕು?
ಪೂರಕ ಪರೀಕ್ಷೆ ನಡೆಸುವ ಸಂಪೂರ್ಣ ಜವಾಬ್ದಾರಿ ಜಿಲ್ಲಾ ಉಪ ನಿರ್ದೇಶಕರಿಗೆ ಸೇರಿದೆ. ಮಾರ್ಚ್ 30 ಕ್ಕೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಮಯದಲ್ಲಿ ಪೂರಕ ಪರೀಕ್ಷೆಗೆ ಶುಲ್ಕ ಕಟ್ಟಲು ಅನುವಾಗುವಂತೆ ಕಾಲೇಜುಗಳ ಸೂಚನಾ ಫಲಕದಲ್ಲಿ ಪೂರಕ ಪರೀಕ್ಷೆಯ ವಿವರ ಪ್ರಕಟಿಸುವಂತೆ ಸೂಚನೆ ನೀಡಲಾಗಿದೆ. ಪೂರಕ ಪರೀಕ್ಷೆಗೆ ಶುಲ್ಕ ಕಟ್ಟಲು ಏಪ್ರಿಲ್ 20 ಕೊನೆಯ ದಿನವಾಗಿದೆ.ಜೂನ್ 6 ರಂದು ಪರೀಕ್ಷೆಯ ಫಲಿತಾಂಶ ಪ್ರಕಟಿಸಬೇಕು ಎಂದು ಸೂಚನೆ ನೀಡಲಾಗಿದೆ.
ಇದನ್ನೂ ಓದಿ : ಮಾಜಿ ಎಮ್ಮೆಲ್ಸಿ ಹೆಸರಲ್ಲಿ ನಕಲಿ ಖಾತೆ, ಕಮಿಷನರ್ ಪತ್ನಿ ಹೆಸರಲ್ಲೂ ವಂಚನೆ