ಬೆಂಗಳೂರು: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರು ಇಂದು(ಏ.೬) ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಚುನಾವಣಾ ಸ್ಪರ್ಧೆಗೆ ಪಕ್ಷದ ಬಿ ಫಾರಂ ಪಡೆದರು.
ಇದನ್ನೂ ಓದಿ : ಮೋದಿ ಮತ್ತೆ ಪ್ರಧಾನಿಯಾಗಲೆಂದು ಬೆರಳನ್ನೇ ಕತ್ತರಿಸಿಕೊಂಡ ಅಭಿಮಾನಿ !
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಚೇರಿಯಲ್ಲಿ ಡಾ.ಅಂಜಲಿ ಅವರಿಗೆ ಬಿ ಫಾರಂ ಹಸ್ತಾಂತರಿಸಿ, ಚುನಾವಣೆಯಲ್ಲಿ ವಿಜಯಶಾಲಿಯಾಗಲಿ ಎಂದು ಶುಭ ಹಾರೈಸಿದರು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ, ಶಿರಸಿ ಶಾಸಕ ಭೀಮಣ್ಣ ನಾಯ್ಕ, ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ್ ಮತ್ತು ಕಿತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಗನಗೌಡ ಪಾಟೀಲ್ ಉಪಸ್ಥಿತರಿದ್ದರು.
ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಏ.೧೬ರಂದು ಬೆಳಿಗ್ಗೆ ೧೦ಕ್ಕೆ ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ.