ಬೆಳಗಾವಿ: ಸ್ವಿಫ್ಟ್ ಮತ್ತು ಅಲ್ಟೋ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಯರಗಟ್ಟಿ ತಾಲೂಕಿನ ಕುರಬಗಟ್ಟಿ ಕ್ರಾಸ್ ಬಳಿ ಶುಕ್ರವಾರ ನಡೆದಿದೆ.
ಇದನ್ನೂ ಓದಿ : ರಾಯಬಾಗದಲ್ಲಿ ಭೀಕರ ಅಪಘಾತ – ಏಳು ಬಲಿ
ಭೀಕರ ಅಪಘಾತದಲ್ಲಿ ಓರ್ವ ಮಹಿಳೆ, ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಮುತ್ತು ನಾಯಕ(8), ಗೋಪಾಲ್ ನಾಯಕ(45) ಹಾಗೂ ಧಾರವಾಡ ಮೂಲದ ಅನ್ನಪೂರ್ಣ(53) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ : ರಸ್ತೆ ಅಪಘಾತದಲ್ಲಿ ಶಾಸಕಿ ಸಾವು
ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮುರಗೋಡ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ವಿಡಿಯೋ ನೋಡಿ : ನಾಮಧಾರಿ ಪ್ರೀಮಿಯರ್ ಲೀಗ್ ಉದ್ಘಾಟನೆ https://fb.watch/qowh6MeqFN/?mibextid=Nif5oz