ಭಟ್ಕಳ : ನಾಮಧಾರಿ ಕುಲಗುರು ಉಜಿರೆಯ ಶ್ರೀರಾಮ ಕ್ಷೇತ್ರದ ಪೀಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ತಮ್ಮ ೫ನೇ ಚಾತುರ್ಮಾಸ್ಯ ವ್ರತಾಚರಣೆಯನ್ನು ಭಟ್ಕಳ ತಾಲ್ಲೂಕಿನ ಕರಿಕಲ್ ಧ್ಯಾನಮಂದಿರದಲ್ಲಿ ನಡೆಸಲು ನಿರ್ಧರಿಸಿದ್ದಾರೆ.
ಅದ್ದೂರಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಕೃಷ್ಣ ನಾಯ್ಕ ಆಸರಕೇರಿ ಹೇಳಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಅವರು ಬುಧವಾರ ಪಟ್ಟಣದ ಆಸರಕೇರಿ ನಿಚ್ಚಲಮಕ್ಕಿ ವೆಂಕಟ್ರಮಣ ದೇವಸ್ಥಾನದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಕೇವಲ ನಾಮಧಾರಿ ಮಾತ್ರವಲ್ಲದೇ ಜಿಲ್ಲೆಯ ಹಿಂದುಳಿದ ಸಮಾಜದ ಮಾರ್ಗದರ್ಶಕರೂ ಆಗಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಜುಲೈ ೨೧ರಿಂದ ಆಗಷ್ಟ್ ೩೦ರ ತನಕ ಭಟ್ಕಳದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಡೆಸುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಷಯವಾಗಿದೆ. ಜಿಲ್ಲೆಯ ನಾಮಧಾರಿಗಳು ಸೇರಿದಂತೆ ಹಿಂದುಳಿದ ಸಮಾಜದವರು ಗುರುವಿನ ಅನುಗ್ರಹ ಪಡೆಯಲು ಸಿಕ್ಕಂತಹ ಅವಕಾಶವಾಗಿದೆ. ಚಾತುರ್ಮಾಸ್ಯ ಕಾರ್ಯಕ್ರಮವನ್ನು ಭಟ್ಕಳ ಹಾಗೂ ಮಾವಳ್ಳಿ ನಾಮಧಾರಿ ಕೂಟಗಳ ಸಹಯೋಗದಲ್ಲಿ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಪ್ರತಿ ದಿವಸ ಗುರುಗಳ ಪಾದಪೂಜೆ, ಸತ್ಸಂಗ, ಅನ್ನಸಂತರ್ಪಣೆ ಹಾಗೂ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಇದನ್ನೂ ಓದಿ : ಬ್ರಹ್ಮಾನಂದ ಸರಸ್ವತಿ ಶ್ರೀಗಳ ಚಾತುರ್ಮಾಸ್ಯ ಜು. ೨೧ರಿಂದ
ಜು.೨೧ರಂದು ಭಟ್ಕಳ ಪಟ್ಟಣದ ಆಸರಕೇರಿಯ ವೆಂಕಟ್ರಮಣ ದೇವಸ್ಥಾನದಿಂದ ಶ್ರೀಗಳನ್ನು ಭವ್ಯ ಮರೆವಣಿಗೆಯಲ್ಲಿ ಕರಿಕಲ್ ಧ್ಯಾನಮಂದಿರಕ್ಕೆ ಕರೆದೊಯ್ಯಲಾಗುವುದು. ಆ.೩೦ರಂದು ಶ್ರೀಗಳ ಚಾತುರ್ಮಾಸ್ಯ ಸೀಮೋಲ್ಲಂಘನ ಸಾರದಹೊಳೆಯ ಸಾರದ ನದಿಯ ತಟದಲ್ಲಿ ನಡೆಯಲಿದೆ ಎಂದರು.
ಶ್ರೀ ರಾಮ ಸೇವಾ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಕ ಆಸರಕೇರಿ ಮಾತನಾಡಿ, ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಎಲ್ಲಾ ಸಮಸ್ತ ಹಿಂದೂ ಸಮಾಜದವರು ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆಯವಂತೆ ಕೋರಿದರು.
ಇದನ್ನೂ ಓದಿ : ಆಧಾರ ಜೋಡಣೆಯಿಲ್ಲದ ಪಂಪ್ ಸೆಟ್ ಸ್ಥಾವರಕ್ಕೆ ಸಹಾಯಧನ ಸಿಗದು
ಮಾಜಿ ಶಾಸಕ ಸುನೀಲ ನಾಯ್ಕ ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಶ್ರೀಗಳು ಚಾತುರ್ಮಾಸ್ಯ ವ್ರತಾಚರಣೆ ನಡೆಸಲಿದ್ದಾರೆ. ಜಿಲ್ಲೆಯ ನಾಮಧಾರಿ ಸಮಾಜದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಶ್ರೀಗಳ ಆಶೀರ್ವಾದ ಪಡೆಯುವಂತೆ ತಿಳಿಸಿದರು.
ಇದನ್ನೂ ಓದಿ : ಮೀನುಗಾರಿಕೆ ಅಲ್ಲ, ಮೀನುಗಾರರ ಇಲಾಖೆ ಎಂದ ಸಚಿವ ಮಂಕಾಳ
ಭಟ್ಕಳ ನಾಮಧಾರಿ ಹೋಬಳಿ ಅಧ್ಯಕ್ಷ ಅರುಣ ನಾಯ್ಕ, ಮಾವಳ್ಳಿ ಹೋಬಳಿ ಅಧ್ಯಕ್ಷ ಆರ್.ಕೆ. ನಾಯ್ಕ ಹಾಗೂ ಮಾವಳ್ಳಿ ಹೋಬಳಿ ಮೊಕ್ತೇಸರ ಸುಬ್ರಾಯ ನಾಯ್ಕ ಮಾತನಾಡಿದರು. ಭಟ್ಕಳ ಹಾಗೂ ಮಾವಳ್ಳಿ ಹೋಬಳಿಯ ನಾಮಧಾರಿ ಪ್ರಮುಖರು ಉಪಸ್ಥಿತರಿದ್ದರು.
ಇದನ್ನೂ ಓದಿ : ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವನ ಕೈ ತುಂಡು