ಭಟ್ಕಳ: ಭಟ್ಕಳ ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಮುರ್ಡೇಶ್ವರ ಜನತಾ ಕಾಲೋನಿಯ ಈಶ್ವರ ಎಸ್. ನಾಯ್ಕ ಅವರನ್ನು ನೇಮಕ ಮಾಡಿ ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಆದೇಶ ಮಾಡಿದ್ದಾರೆ.
ಇದನ್ನೂ ಓದಿ : ಬಿ ಫಾರಂ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ
ಜಾತ್ಯತೀತ ಜನತಾದಳ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹಾಗೂ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ನಿರ್ದೇಶನದಂತೆ ಭಟ್ಕಳ ತಾಲೂಕು ಜೆಡಿಎಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಜೆ.ಡಿ.ಎಸ್. ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಶ್ರಮಿಸುವಂತೆ ಜಿಲ್ಲಾಧ್ಯಕ್ಷರು ಆದೇಶದಲ್ಲಿ ತಿಳಿಸಿದ್ದಾರೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಈಶ್ವರ ಎಸ್. ನಾಯ್ಕ ಅವರು ಕಳೆದ ಹಲವಾರು ವರ್ಷಗಳಿಂದ ಜೆ.ಡಿ.ಎಸ್. ಸಕ್ರಿಯ ಕಾರ್ಯಕರ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪಕ್ಷದ ತಾಲೂಕು ಉಪಾಧ್ಯಕ್ಷರಾಗಿ ಮತ್ತು ವಿವಿಧ ಸಂಘಟನೆಗಳಲ್ಲಿ ಪ್ರಮುಖ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಭಟ್ಕಳದ ಪಿ.ಎಲ್.ಡಿ. ಬ್ಯಾಂಕಿನ ನಿರ್ದೇಶಕರಾಗಿದ್ದ ಇವರು ಪ್ರಸ್ತುತ ವಾಹನ ಚಾಲಕರ ಹಾಗೂ ಮಾಲಕರ ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.