ಭಟ್ಕಳ: ಮಹಾರಾಷ್ಟ್ರದ ಪುಣೆಯಲ್ಲಿ ನಡೆಸಿದ ಉಗ್ರ ಚಟುವಟಿಕೆಗೆ ಸಂಬಂಧಿಸಿದ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಎಟಿಎಸ್ ತಂಡ ಭಟ್ಕಳದ ಯುವಕನ ಮನೆಗೆ ನೋಟೀಸ್ ಅಂಟಿಸಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಮೂಲತಃ ಭಟ್ಕಳದ ನವಾಯತ್ ಕಾಲೋನಿಯ ಹಾಜಿ ಮಂಜಿಲ್ ನಿವಾಸಿಯಾಗಿರುವ ಅಬ್ದುಲ್ ಖಾದಿರ್ ಸುಲ್ತಾನ್ ಅಲಿಯಾಸ್ ಮೌಲಾನಾ ಸುಲ್ತಾನ್ ಶಂಕಿತ ಆರೋಪಿಯಾಗಿದ್ದಾನೆ. ಪುಣೆಯಲ್ಲಿ ಕಾನೂನು ಬಾಹಿರ ಕೃತ್ಯ ಎಸಗಿದ್ದಕ್ಕಾಗಿ ಕಲಂ 10 ಮತ್ತು 13 ರನ್ವಯ ಭಟ್ಕಳದ ಯುವಕನ ಮೇಲೆ ಪ್ರಕರಣ ದಾಖಲಾಗಿದೆ. ಪುಣೆಯ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟೀಸಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆಗೆ ಬೇಕಿದೆ ದುರಸ್ತಿ ಭಾಗ್ಯ
ಭಟ್ಕದಲ್ಲಿ ಶೋಧ ನಡೆಸಿದ ತಂಡ ಅಂತಿಮವಾಗಿ ಆತನ ಮನೆಗೆ ನೋಟೀಸ್ ಅಂಟಿಸಿ ಹೋಗಿದ್ದಾಗಿ ತಿಳಿದು ಬಂದಿದೆ. ಜೂನ್ ೬ನೇ ತಾರೀಕನ್ನು ನಮೂದಿಸಿರುವ ನೋಟೀಸ್ ಅಂಟಿಸಲಾಗಿದೆ.
ಭಟ್ಕಳಕ್ಕೆ ಮಹಾರಾಷ್ಟ್ರ ಎಟಿಎಸ್ ತಂಡ ಆತನ ಮನೆಯನ್ನು ಹುಡುಕಿಕೊಂಡು ಬಂದಿತ್ತು. ಆತ ಮನೆಯಲ್ಲಿ ಇಲ್ಲದ ಕಾರಣ ನೋಟೀಸ್ ಅಂಟಿಸಿ ಸಾರ್ವಜನಿಕವಾಗಿ ಜಾಹೀರ ಮಾಡಿ ತೆರಳಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ :ವಿದ್ಯುತ್ ಹರಿಯುತ್ತಿದ್ದ ತಂತಿ ಬೇಲಿ ಮುಟ್ಟಿದ ಮಹಿಳೆ ಸಾವು
೨೦೦೮ರಲ್ಲಿ ಪುಣೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿರುವ ಅಬ್ದುಲ್ ಖಾದಿರ್ ಸುಲ್ತಾನ್ ಅಲಿಯಾಸ್ ಮೌಲಾನಾ ಸುಲ್ತಾನ್ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.