ಭಟ್ಕಳ : ಭಟ್ಕಳದಲ್ಲಿ ಅಕ್ರಮವಾಗಿ ಗೋ ಸಾಗಾಟ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆ ಭಟ್ಕಳ ತಾಲೂಕಿನಾದ್ಯಂತ ಚೆಕ್ ಪೋಸ್ಟಗಳನ್ನು ಬಿಗಿ ಬಂದೋಬಸ್ತ್ ಮಾಡಬೇಕು. ಗೋವುಗಳನ್ನು ರಕ್ಷಣೆ ಮಾಡದೇ ಹೋದಲ್ಲಿ ತಾಲೂಕಿನ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಸೇರಿ ಬೃಹತ್ ಪ್ರತಿಭಟನೆ ಮಾಡಲಿದ್ದೇವೆ ಎಂದು ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ ಖಡಕ್ ಎಚ್ಚರಿಕೆ ನೀಡಿದರು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಅವರು ಶುಕ್ರವಾರದಂದು ಇಲ್ಲಿನ ಮಣ್ಕುಳಿಯ ಬಿಜೆಪಿ ಕಾರ್ಯಾಲಯದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಭಟ್ಕಳದಲ್ಲಿ ಅಕ್ರಮವಾಗಿ, ಹಿಂಸಾತ್ಮಕವಾಗಿ ಗೋ ಕಳ್ಳರಿಂದ ಗೋ ಸಾಗಾಟ ನಡೆಯುತ್ತಿದೆ. ಈ ಬಗ್ಗೆ ಹಿಂದು ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಪೊಲೀಸರನ್ನು ಪ್ರಶ್ನಿಸಿದ್ದೇವೆ. ಇದಕ್ಕೆ ಪೊಲೀಸ್ ಇಲಾಖೆಯವರು ಇನ್ನು ತನಕ ಗೋವುಗಳನ್ನು ರಕ್ಷಿಸುವ ಕೆಲಸ ಮಾಡಿಲ್ಲ. ಆದರೆ ನಮ್ಮ ಹಿಂದು ಸಂಘಟನೆ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಸಾಕಷ್ಟು ಗೋವುಗಳನ್ನು ರಕ್ಷಿಸಿದ್ದಾರೆ. ಸದ್ಯಕ್ಕೆ ಭಟ್ಕಳದಲ್ಲಿ ಯಾವುದೇ ಪೊಲೀಸ್ ಚೆಕ್ ಪೋಸ್ಟ್ ಕೆಲಸ ನಿರ್ವಹಿಸುತ್ತಿಲ್ಲ. ಎಲ್ಲವೂ
ನಿಷ್ಕ್ರಿಯವಾಗಿದೆ. ಈ ಬಗ್ಗೆ ಇಲಾಖೆ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದಲ್ಲಿ ಪಕ್ಷದಿಂದ ಬ್ರಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಇದನ್ನೂ ಓದಿ : ಸಚಿವ ಮಂಕಾಳ ವೈದ್ಯ ವಿರುದ್ಧ ಮಾಜಿ ಶಾಸಕ ಸುನೀಲ ನಾಯ್ಕ ಗಂಭೀರ ಆರೋಪ
ಉಸ್ತುವಾರಿ ಸಚಿವರ ಮಾಲೀಕತ್ವದ ಬಸ್ತಿಮಕ್ಕಿಯಲ್ಲಿನ ಬೀನಾ ವೈದ್ಯ ಇಂಟರ್ನ್ಯಾಷನಲ್ ಸ್ಕೂಲ್ ಜಾಗದ ಪಕ್ಕದಲ್ಲಿನ ಸರಕಾರದ ಅರಣ್ಯ ಭೂಮಿ ಒತ್ತುವರಿ ಮಾಡಿ ಅಲ್ಲಿನ ಮಣ್ಣು ಸಾಗಾಟ ಮಾಡಿದ ಆರೋಪವಿದೆ. ಸಂಬಂಧಪಟ್ಟ ಸಂಸ್ಥೆಯ ಮುಖ್ಯಸ್ಥರ ಮೇಲೆ ಕ್ರಮ ಕೈಗೊಳ್ಳದೆ ಅಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಪ್ರಕರಣ ದಾಖಲು ಮಾಡಿದ್ದಾರೆ. ಆದರೆ ಒತ್ತುವರಿ ಮಾಡಿದ್ದ ಅರಣ್ಯ ಭೂಮಿಯನ್ನು ಫೆನ್ಸಿಂಗ್ ಮಾಡಿಲ್ಲ. ಅರಣ್ಯ ಇಲಾಖೆ ಎಲ್ಲಾ ಜಾಗವನ್ನು ಇಲಾಖೆಯ ವಶಕ್ಕೆ ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ಭಾರತೀಯ ಜನತಾ ಪಾರ್ಟಿ ತಕ್ಕ ಉತ್ತರ ನೀಡಲಿದೆ ಎಂದರು.
ಇದನ್ನೂ ಓದಿ : ಶಾಂತೇರಿ ಕಾಮಾಕ್ಷಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ವರ್ಧಂತಿ
ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ ಮಾತನಾಡಿ,
ಗುರುವಾರ ರಾತ್ರಿ ಗ್ರಾಮೀಣ ಠಾಣೆಗೆ ಹಿಂದೂ ಸಂಘಟನೆ ಕಾರ್ಯಕರ್ತರು ತೆರಳಿ ಭಟ್ಕಳ ತಾಲೂಕಿನಾದ್ಯಂತ ಚೆಕ್ ಪೋಸ್ಟಗಳನ್ನು ಬಿಗಿ ಬಂದೋಬಸ್ತ್ ಮಾಡುವಂತೆ ಕೋರಿಕೊಂಡಿದ್ದರು. ಆದರೆ ಮೇಲಾಧಿಕಾರಿಗಳ ಗಮನಕ್ಕೆ ತನ್ನಿ ಎಂದು ಓರ್ವ ಪೋಲಿಸ್ ಅಧಿಕಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಭಟ್ಕಳದ ಪೊಲೀಸರಿಗೆ ಅವರ ಕಾರ್ಯವ್ಯಾಪ್ತಿಯಲ್ಲಿ ಕೆಲಸ ಮಾಡಲು ಸ್ವಾತಂತ್ರ್ಯ ಇಲ್ಲ ಎನ್ನುವುದು ಸ್ಪಷ್ಟವಾದಂತಾಗಿದೆ ಎಂದರು.
ಇದನ್ನೂ ಓದಿ : ಹಿಂಸಾತ್ಮಕವಾಗಿ ಕೋಣ ಸಾಗಾಟ ಯತ್ನ ; ಇಬ್ಬರ ಬಂಧನ, ಓರ್ವ ಪರಾರಿ
ಈ ಸಂದರ್ಭದಲ್ಲಿ ಪಶ್ಚಿಮ ಘಟ್ಟ ಸಂರಕ್ಷಣೆ ಕಾರ್ಯಪಡೆ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ತಾಲೂಕು ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ರಾಜ್ಯ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ಈಶ್ವರ ನಾಯ್ಕ, ಸುರೇಶ ನಾಯ್ಕ ಕೋಣೆಮನೆ, ಮೋಹನ ಮುಂತಾದವರು ಉಪಸ್ಥಿತರಿದ್ದರು.