ಭದ್ರಾವತಿ: ವೈನ್ ಶಾಪ್ ಒಂದರಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಭದ್ರಾವತಿ ಬಸ್ ನಿಲ್ದಾಣ ಸಮೀಪದ ಬಾರ್ ಒಂದರಲ್ಲಿ ಘಟನೆ ಸಂಭವಿಸಿದೆ. ಹೇಮಂತ್ ಅಲಿಯಾಸ್ ಕರಿ ಚಿಕ್ಕಿ ಹತ್ಯೆಯಾದವನು. ನ್ಯೂ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇನ್ನು, ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ವೈಯಕ್ತಿಕ ಕಾರಣಕ್ಕೆ ಹತ್ಯೆಯಾಗಿದೆ. ಈ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಸತ್ಯಾನಂದ, ಮುಬಾರಕ್, ಖಲೀಲ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.