ಕುಮಟಾ : ಶಿಕ್ಷಕರು ಮಕ್ಕಳ ಅಂಕ ಗಳಿಕೆಗೆ ಮಾತ್ರವಲ್ಲದೆ ಅವರ ಸಂವಹನ ಕೌಶಲ್ಯ, ಭಾಷಾ ಪ್ರಾವೀಣ್ಯತೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಒತ್ತು ನೀಡಬೇಕು. ಆ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ ಹೇಳಿದರು.
ಇದನ್ನೂ ಓದಿ : ಕಟ್ಟಡ ಕಾರ್ಮಿಕರ ನೋಂದಣಿಗೆ ನಕಲಿ ದಾಖಲೆ ಸಲ್ಲಿಕೆ ಶಿಕ್ಷಾರ್ಹ ಅಪರಾಧ
ಅವರು ಪಟ್ಟಣದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮಕ್ಕಳಿಗೆ ವೃತ್ತಿ ಬದುಕಿನಲ್ಲಿ ಹೇಗೆ ವರ್ತಿಸಬೇಕು, ಸಮಾಜದೊಂದಿಗೆ ಹೇಗೆ ವ್ಯವಹರಿಸಬೇಕು ಎಂಬುದನ್ನು ಕಲಿಕಾ ಹಂತದಲ್ಲಿಯೇ ತಿಳಿಸಿಕೊಡಬೇಕು. ಕೇವಲ 100 ಪ್ರತಿಶತ ಅಂಕ ಗಳಿಕೆ ಮಾತ್ರವಲ್ಲದೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ : ಗೃಹಜ್ಯೋತಿ ಗ್ಯಾರಂಟಿಯಲ್ಲಿ ಉತ್ತರ ಕನ್ನಡ ಜಿಲ್ಲೆ ಶೇ.100 ಸಾಧನೆ
ಇದಕ್ಕೂ ಪೂರ್ವದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಡಾ.ಎ.ವಿ. ಬಾಳಿಗಾ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿರುವ ಭದ್ರತಾ ಕೊಠಡಿಗೆ ಜಿಲ್ಲಾಧಿಕಾರಿಯೊಂದಿಗೆ ಭೇಟಿ ನೀಡಿದರು. ಕೀ ಮ್ಯಾಪ್ ವೀಕ್ಷಿಸಿ, ಅಧಿಕಾರಿಗಳಿಗೆ ಅಗತ್ಯ ಬದಲಾವಣೆಗಳನ್ನು ಸೂಚಿಸಿದರು.
ಇದನ್ನೂ ಓದಿ : ಔಷಧಿ ಅಂಗಡಿಗೆ ನುಗ್ಗಿ ಕಳ್ಳತನ
ಬಳಿಕ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಗೆ ಭೇಟಿ ನೀಡಿ, ಪರಿಶೀಲಿಸಿದರು. ಇದೇ ವೇಳೆ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿ, ಸ್ವಯಂ ಉದ್ಯೋಗ ಕಂಡುಕೊಳ್ಳಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ತಿಳಿಸಿದರು.
ಇದನ್ನೂ ಓದಿ : ನಾಗಮಾಸ್ತಿ ದೇವರ ಭವ್ಯ ಮೆರವಣಿಗೆ
ಮೆಟ್ರಿಕ್ ನಂತರದ ಬಾಲಕರ ವಸತಿ ಶಾಲೆಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳೊಂದಿಗೆ ಮುಕ್ತವಾಗಿ ಮಾತನಾಡಿ ಕುಂದುಕೊರತೆಗಳನ್ನು ಆಲಿಸಿದರು. ಆಹಾರ, ಕುಡಿಯುವ ನೀರು, ವಿಶ್ರಾಂತಿ ಕೊಠಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.
ಇದನ್ನೂ ಓದಿ : ವಿದುಷಿ ಪಲ್ಲವಿಗೆ ಗಂಧರ್ವದ “ಅಲಂಕಾರ”
ಈ ಸಂದರ್ಭದಲ್ಲಿ ಜಿ.ಪಂ. ಉಪ ಕಾರ್ಯದರ್ಶಿ (ಅಭಿವೃದ್ಧಿ) ನಾರಾಯಣ ಜಿ ನಾಯಕ, ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಎಲ್. ಭಟ್, ಡಯಟ್ ಉಪನಿರ್ದೇಶಕಿ (ಆಡಳಿತ) ಲತಾ ನಾಯಕ, ತಾ.ಪಂ. ಸಹಾಯಕ ನಿರ್ದೇಶಕರು ಸೇರಿದಂತೆ ಇತರೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಜೊತೆಗಿದ್ದರು.
ಈ ವಿಡಿಯೋ ನೋಡಿ : ವಾರದ ಸಂತೆ ಮೀರಿಸಿದ ಮಕ್ಕಳ ಸಂತೆ https://fb.watch/qlUfekA4ZR/?mibextid=Nif5oz